ETV Bharat / city

ಗುರು ರಾಘವೇಂದ್ರ ಬ್ಯಾಂಕ್ ಹಗರಣ.. ಆಡಿಟ್ ಮುಗಿಯದೇ ಠೇವಣಿದಾರರ ಹಣ ಹಿಂತಿರುಗಿಸಲಾಗದು: ಆರ್​ಬಿಐ - ಠೇವಣಿದಾರರ ಹಣ ಹಿಂತಿರುಗಿಸಲಾಗದು

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ತನಿಖೆಗೆ ಎಸ್ಐಟಿ ರಚಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್ ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ಹೈಕೋರ್ಟ್
ಹೈಕೋರ್ಟ್
author img

By

Published : Jun 2, 2021, 10:15 PM IST

ಬೆಂಗಳೂರು: ಠೇವಣಿದಾರರಿಗೆ ವಂಚನೆ ಎಸಗಿರುವ ಆರೋಪ ಸಂಬಂಧ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನ ಆಡಿಟ್ ನಡೆಯುತ್ತಿದ್ದು, ಅದು ಪೂರ್ಣಗೊಳ್ಳದೇ ಠೇವಣಿದಾರರಿಗೆ ಹಣ ಹಿಂತಿರುಗಿಸಲು ಸಾಧ್ಯವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೈಕೋರ್ಟ್​ಗೆ ತಿಳಿಸಿದೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ತನಿಖೆಗೆ ಎಸ್ಐಟಿ ರಚಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್ ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮನವಿ ಮಾಡಿ, ಕೋವಿಡ್ ಮತ್ತಿತರ ಕಾರಣಗಳಿಗೆ 39ಕ್ಕೂ ಅಧಿಕ ಠೇವಣಿದಾರರು ಮೃತಪಟ್ಟಿದ್ದಾರೆ. ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಆದ್ದರಿಂದ ಠೇವಣಿದಾರರ ಹಣ ಬಿಡುಗಡೆಗೆ ನಿರ್ದೇಶಿಸಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಆರ್​ಬಿಐ ಪರ ವಕೀಲರು, ಬ್ಯಾಂಕ್​ನ ಮೂರು ವರ್ಷಗಳ ಲೆಕ್ಕ ಪರಿಶೋಧನಾ ಕಾರ್ಯ ಪ್ರಗತಿಯಲ್ಲಿದೆ. ಮೂರು ರೀತಿಯ ಆಡಿಟ್ ನಡೆಯುತ್ತಿದ್ದು, ಅದಕ್ಕಾಗಿ ಮೂರು ಪ್ರತ್ಯೇಕ ಸಿಎಗಳನ್ನು ನೇಮಿಸಲಾಗಿದೆ. 2020ನೇ ಸಾಲಿನ ಆಡಿಟ್ ಅಂತಿಮ ಹಂತದಲ್ಲಿದ್ದು, ಸದ್ಯದಲ್ಲೇ ವರದಿ ಸಲ್ಲಿಸಲಾಗುತ್ತದೆ. 2017ರಿಂದ 2019ರವರೆಗಿನ ಮೂರು ವರ್ಷದ ಫೊರೆನ್ಸಿಕ್ ಆಡಿಟ್ ಪ್ರಗತಿಯಲ್ಲಿದೆ. ಸಹಕಾರ ಇಲಾಖೆ ನಡೆಸುತ್ತಿರುವ ಇಲಾಖಾ ಆಡಿಟ್ ಕೂಡ ಅಂತಿಮ ಹಂತದಲ್ಲಿದೆ. ಹೀಗಾಗಿ ಆಡಿಟ್ ಪೂರ್ಣಗೊಳ್ಳದೆ ಠೇವಣಿದಾರರಿಗೆ ಹಣ ಹಿಂದಿರುಗಿಸಲು ಸಾಧ್ಯವಿಲ್ಲ. ಆದರೆ, ವೈದ್ಯಕೀಯ ತುರ್ತು ಇರುವವರು ಹಣ ಬೇಕಿದ್ದಲ್ಲಿ ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಬಹುದು ಎಂದರು.

ಬ್ಯಾಂಕ್ ಸ್ಥಳಾಂತರಕ್ಕೆ ಮನವಿ
ಇದೇ ವೇಳೆ ಬ್ಯಾಂಕ್​ನ ಆಡಳಿತಾಧಿಕಾರಿ ಶ್ಯಾಮ್ ಪ್ರಸಾದ್ ವರದಿ ಸಲ್ಲಿಸಿ, ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ಬ್ಯಾಂಕ್ ಕಟ್ಟಡಕ್ಕೆ ಕಚೇರಿ ಸ್ಥಳಾಂತರಿಸಲು ಅವಕಾಶ ಮಾಡಿಕೊಡಬೇಕು, ಸಿಬ್ಬಂದಿಗೆ ವೇತನ ನೀಡಲು ಅನುಮತಿಸಬೇಕು. ಸಾಲ ವಸೂಲಿ ಪ್ರಕ್ರಿಯೆ ಆರಂಭಿಸಲು, ಠೇವಣಿ ನವೀಕರಣಕ್ಕೆ ಅನುಮತಿ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ವರದಿಯನ್ನು ಪರಿಶೀಲಿಸಿದ ಪೀಠ, ಆಡಳಿತಾಧಿಕಾರಿಯಿಂದ ಕೆಲವು ವಿವರಣೆ ಪಡೆಯಿತು. ಬಳಿಕ, ಆಡಳಿತಾಧಿಕಾರಿಗೆ ಅಧಿಕಾರ ನೀಡುವ ಕುರಿತು ಕಾನೂನು ಪ್ರಕಾರ ಪರಿಶೀಲಿಸಬೇಕು. ಹೀಗಾಗಿ, ಮುಂದಿನ ವಿಚಾರಣೆ ವೇಳೆ ಸಕ್ಷಮ ಪ್ರಾಧಿಕಾರದ ಅಧಿಕಾರಿ ಹಾಜರಾಗಿ ವಿವರಣೆ ನೀಡಬೇಕೆಂದು ಸೂಚಿಸಿತು.

ತನಿಖಾ ವರದಿ ಸಲ್ಲಿಸಲು ನಿರ್ದೇಶನ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ಪೀಠಕ್ಕೆ ಮಾಹಿತಿ ನೀಡಿ, ಬ್ಯಾಂಕ್ ಹಗರಣ ಸಂಬಂಧ ಮೂರು ಎಫ್ಐಆರ್ ದಾಖಲಾಗಿದೆ, ಯಾವ ಪ್ರಕರಣದಲ್ಲೂ ತನಿಖಾಧಿಕಾರಿಗಳು ಅಂತಿಮ ವರದಿ ಸಲ್ಲಿಸಿಲ್ಲ ಎಂದರು. ಪ್ರತಿಕ್ರಿಯಿಸಿದ ಪೀಠ, ತನಿಖಾಧಿಕಾರಿಗಳು ಮುಂದಿನ ವಿಚಾರಣೆ ವೇಳೆ ತನಿಖಾ ಪ್ರಗತಿ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕೆಂದು ನಿರ್ದೇಶಿಸಿ, ಜೂನ್ 16ಕ್ಕೆ ವಿಚಾರಣೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.