ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಇಂದು ರಾಜ್ಯಸಭೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ವಿಧಾನಸೌಧದ ಮೊದಲ ಮಹಡಿಯ ರಾಜ್ಯಸಭೆ ಚುನಾವಣೆ ಅಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಹೆಚ್ಡಿಡಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರ್, ಹೆಚ್.ಕೆ. ಕುಮಾರಸ್ವಾಮಿ ಮತ್ತಿತರ ನಾಯಕರು ಜೊತೆಗಿದ್ದರು.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕೇವಲ ನಾಲ್ವರು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವುದು ಅಸಾಧ್ಯವಾಗಿದೆ. ದೇವೇಗೌಡರ ಗೆಲುವು ಭಾಗಶಃ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದಿಂದ ಮಲ್ಲಿಕಾರ್ಜುನ ಖರ್ಗೆ ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೀಗ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದು, ಬಿಜೆಪಿಯ ಇಬ್ಬರು ನಾಯಕರು ಮಧ್ಯಾಹ್ನ 1.30 ಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ.