ಬೆಂಗಳೂರು: ಕೋವಿಡ್ 19 ಸೋಂಕಿನಿಂದ ಒಂದು ವಾರ ಮನೆಯಲ್ಲೇ ಚಿಕಿತ್ಸೆ ಪಡೆದು ಓದು ಮತ್ತು ಸಿನೆಮಾ ವೀಕ್ಷಣೆಯಲ್ಲೇ ಸಮಯ ಕಳೆದೆ. ಈ ಬಿಡುವಿನಲ್ಲಿ ಎರಡು ಸಿನೆಮಾಗಳನ್ನು ವೀಕ್ಷಿಸಿದೆ. ಒಂದು 'ಜೈ ಭೀಮ್' ಮತ್ತೊಂದು 'ಜನ ಗಣ ಮನ'. ಸೂಕ್ಷ್ಮ ಕಥಾಹಂದರದ ಈ ಸಿನೆಮಾಗಳೆರಡೂ ನನ್ನ ಮನ ಕಲಕಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
-
ʼಜನ ಗಣ ಮನʼ ಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ.
— H D Kumaraswamy (@hd_kumaraswamy) July 18, 2022 " class="align-text-top noRightClick twitterSection" data="
ಎರಡೂ ಚಿತ್ರಗಳ ನಿರ್ದೇಶಕರು ಅಭಿನಂದನಾರ್ಹರು.9/9
">ʼಜನ ಗಣ ಮನʼ ಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ.
— H D Kumaraswamy (@hd_kumaraswamy) July 18, 2022
ಎರಡೂ ಚಿತ್ರಗಳ ನಿರ್ದೇಶಕರು ಅಭಿನಂದನಾರ್ಹರು.9/9ʼಜನ ಗಣ ಮನʼ ಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ.
— H D Kumaraswamy (@hd_kumaraswamy) July 18, 2022
ಎರಡೂ ಚಿತ್ರಗಳ ನಿರ್ದೇಶಕರು ಅಭಿನಂದನಾರ್ಹರು.9/9
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ ಮತ್ತು 'ಜೈ ಭೀಮ್' ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ಭಾರತವೇ ಆಲೋಚಿಸಬೇಕು. ನಾನೂ ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ ಎಂದಿದ್ದಾರೆ.
ಸಂವಿಧಾನ ನಮಗೆ ಶ್ರೇಷ್ಠ ನ್ಯಾಯಾಂಗವನ್ನು ಕೊಟ್ಟಿದೆ. ಕಷ್ಟ ಎದುರಾದಾಗ ಬಿಲಿನಿಯರ್ನಿಂದ ಕಟ್ಟಕಡೆಯ ಬಡ ಪ್ರಜೆವರೆಗೂ ಎಲ್ಲರೂ ಕೋರ್ಟ್ ಕಡೆ ನೋಡುತ್ತಾರೆ. ಎಲ್ಲರೂ ಇಲ್ಲಿ ಸಮಾನರು. ಅದು ಹಕ್ಕು ಹೌದು. ʼಜನ ಗಣ ಮನʼ ಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ. ಎರಡೂ ಚಿತ್ರಗಳ ನಿರ್ದೇಶಕರು ಅಭಿನಂದನಾರ್ಹರು ಎಂದು ಹೆಚ್ಡಿಕೆ ಶ್ಲಾಘಿಸಿದ್ದಾರೆ.
ಇದನ್ನೂ ಓದಿ: ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಪರಸ್ಪರ ಗೌರವ ಕಡಿಮೆಯಾಗುತ್ತಿದೆ: ನ್ಯಾ.ಎನ್.ವಿ.ರಮಣ