ETV Bharat / city

ನಮ್ಮ ಪಕ್ಷದ ತಂಟೆಗೆ ಬಂದವರೇ ಬೀದಿಪಾಲಾಗ್ತಾರೆ: ಎಚ್ಚರಿಕೆ ನೀಡಿದ ಹೆಚ್.ಡಿ.ಕೆ - ನಮ್ಮ ಪಕ್ಷದ ತಂಟೆಗೆ ಬಂದರೆ ಅವರೇ ಬೀದಿಪಾಲು

ಮೇ 13 ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ 'ಜನತಾ ಜಲಧಾರೆ' ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 4-5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. 2023ರ ಚುನಾವಣೆಗೆ ಈ ಸಭೆಯ ಮೂಲಕ ಅಧಿಕೃತ ಪ್ರಚಾರ ಆರಂಭವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

H. D. Kumaraswamy press meet about janatha jaladhare closing ceremony program
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
author img

By

Published : May 10, 2022, 3:52 PM IST

ಬೆಂಗಳೂರು: ಕೆಲವರು ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಪಕ್ಷಕ್ಕೆ ಡ್ಯಾಮೇಜ್ ಮಾಡಲು ಮುಂದಾದರೆ ಅವರೇ ಬೀದಿಪಾಲಾಗುತ್ತಾರೆ. ಅದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಬಿ.ಎಲ್. ಶಂಕರ್ ಕಾಂಗ್ರೆಸ್​ಗೆ ಹೋಗಿ ಏನಾದ್ರು? ಇಪ್ಪತ್ತು ವರ್ಷವಾಯ್ತು ಅಲ್ಲಿ ಏನಾಗಿದ್ದಾರೆ? ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ, ಜೆಡಿಎಸ್​ಗೆ ಯಾರೂ ಅನಿವಾರ್ಯವಲ್ಲ. ಪಕ್ಷವೇ ಹೊಸ ನಾಯಕತ್ವವನ್ನು ಹುಟ್ಟು ಹಾಕಲಿದೆ ಎಂದು ಅಸಮಾಧಾನಿತರ ವಿರುದ್ಧ ಗುಡುಗಿದರು.

ನೆಲಮಂಗಲ ಸಮೀಪದಲ್ಲಿ ನಡೆಯುವ ಸಮಾವೇಶದ ಮೈದಾನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದು, ಮೇ 13 ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ 'ಜನತಾ ಜಲಧಾರೆ' ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಮೇ 13 ರಂದು ಜನತಾ ಜಲಧಾರೆ ಸಮಾರೋಪ ಸಮಾರಂಭ

ಸಮಾರೋಪ ಸಮಾರಂಭದಲ್ಲಿ ಸುಮಾರು 4-5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ನಗರದ ನಾಗರೀಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಬೆಂಗಳೂರು ಹೊರ ವಲಯದಲ್ಲಿ ಸಮಾರೋಪ ಹಮ್ಮಿಕೊಳ್ಳಲಾಗಿದೆ. ನೆಲಮಂಗಲ ಬಾವಿ ಕೆರೆ ರಸ್ತೆಯಲ್ಲಿರುವ ಮೈದಾನದಲ್ಲಿ ಮೇ 13 ರಂದು ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭವಾಗಿದೆ ಎಂದು ಹೆಚ್​ ಡಿ ಕುಮಾರಸ್ವಾಮಿ ಮಾಹಿತಿ ನೀಡಿದರು.

ಗಂಗಾ ಆರತಿ: ಜಲಧಾರೆ ಕಾರ್ಯಕ್ರಮದಲ್ಲಿ ಸಂಜೆ 6.30 ಕ್ಕೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ 20 ಜನರ ತಂಡ ವಾರಣಾಸಿಯಿಂದ ಬರುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ನೀರನ್ನು ಸಂಪೂರ್ಣವಾಗಿ ಬಳಕೆ ಮಾಡಲು ಗಂಗಾ ತಾಯಿ ಆಶೀರ್ವಾದ ಪಡೆಯಲು ಈ‌ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಮರಿತಿಬ್ಬೇಗೌಡರ ವಿರುದ್ಧ ವಾಗ್ದಾಳಿ: ಹಣ ಇದ್ದವರಿಗೆ ಮಣೆ ಹಾಕಲಾಗುತ್ತಿದೆ ಎಂಬ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಮರಿತಿಬ್ಬೇಗೌಡ ಮಾತನಾಡಿರುವುದನ್ನು ಗಮನಿಸಿದ್ದೇನೆ. ನಮ್ಮ‌ ಪಕ್ಷಕ್ಕೆ ಅವರು ಎಷ್ಟು ಹಣ ಸಂದಾಯ ಮಾಡಿದ್ದಾರೆ? ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ನೀಡಿದ್ದಾರೆ? ಯಾವ ನಾಯಕರಿಗೆ ಹಣ ಸಂದಾಯ ಮಾಡಿದ್ದರು ಎಂದು ಪ್ರಶ್ನಿಸಿದರು. ಕುಮಾರಸ್ವಾಮಿಗೆ ಕೊಟ್ರೋ? ದೇವೇಗೌಡರಿಗೆ ಕೊಟ್ರೋ? ಇಲ್ಲವೇ ಜನತಾದಳದ ಅಕೌಂಟ್​ಗೆ ಕೊಟ್ಟಿದ್ದಾರೋ? ಅವರ ಚುನಾವಣಾ ಖರ್ಚು ವೆಚ್ಚಕ್ಕೆ ಪಕ್ಷದಿಂದ ಎಷ್ಟು ಕೊಟ್ಟಿದ್ದೇವೆ. ಇದೆಲ್ಲದರ ಬಗ್ಗೆ ಅವರು ಸತ್ಯ ಹೇಳುತ್ತಾರಾ?. ಈ ರೀತಿಯ ಕ್ಷುಲ್ಲಕವಾದ ಹೇಳಿಕೆಗಳ ಬಗ್ಗೆ ಜನರೇ ತೀರ್ಮಾನಿಸುತ್ತಾರೆ ಎಂದು ತಿರುಗೇಟು ನೀಡಿದರು.

ಪರ್ಯಾಯ ರಸ್ತೆ ಬಳಕೆ ಮಾಡುವಂತೆ ಮನವಿ: ನೆಲಮಂಗಲ ಮೈದಾನದಿಂದಲೇ 2023 ರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಬೆಂಗಳೂರಿಂದ ಹಾಸನ , ಶಿವಮೊಗ್ಗ ಕಡೆ ಪ್ರಯಾಣ ಮಾಡುವ ಜನರಿಗೆ ಸ್ವಲ್ಪ ತೊಂದರೆ ಆಗಬಹುದು. ಅದಕ್ಕೆ ಪರ್ಯಾಯ ರಸ್ತೆ ಬಳಕೆ ಮಾಡುವಂತೆ ಕುಮಾರಸ್ವಾಮಿ ಮನವಿ ಮಾಡಿದರು.

ಇದನ್ನೂ ಓದಿ: ತಿಹಾರ್, ಪರಪ್ಪನ ಆಗ್ರಹಾರ ಜೈಲಿಗಾದ್ರೂ ಹಾಕಲಿ ನಾನು ಹೆದರಲ್ಲ: ಡಿ.ಕೆ.ಶಿವಕುಮಾರ್

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.