ETV Bharat / city

3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: 'ಇದು ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ ಎಂದ ಹೆಚ್​ಡಿಕೆ'

ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ ಹಾಗೂ ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು (farmer laws) ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದ್ದು, ಈ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಸ್ವಾಗತಿಸಿದ್ದಾರೆ.

H D Devegowda
ಹೆಚ್.ಡಿ.ಕುಮಾರಸ್ವಾಮಿ
author img

By

Published : Nov 19, 2021, 11:48 AM IST

ಬೆಂಗಳೂರು: ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವುದನ್ನು ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡ (H D Devegowda) ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಸ್ವಾಗತಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ದೇವೇಗೌಡ, 'ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಕಾನೂನಿನ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಪ್ರತಿರೋಧ ತೋರಿದ ಎಲ್ಲ ರೈತರಿಗೆ ನನ್ನ ನಮನ' ಎಂದು ತಿಳಿಸಿದ್ದಾರೆ.

  • I welcome PM @narendramodi’s decision to repeal the 03 #FarmLaws. My salute to all the farmers who put up democratic resistance against the laws. Debate and discussion is key in a parliamentary set up. Here is the speech I had made against the farm laws in the RS in Sept 2020. pic.twitter.com/7z4FDkvbiY

    — H D Devegowda (@H_D_Devegowda) November 19, 2021 " class="align-text-top noRightClick twitterSection" data=" ">

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಟ್ವೀಟ್ ಮಾಡಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯವಾಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳನ್ನು ಏಕಪಕ್ಷೀಯವಾಗಿ ಜಾರಿ ಮಾಡಲಾಗಿತ್ತು. ಈಗ ಏಕಾಏಕಿ ರದ್ದು ಮಾಡಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದಿದ್ದಾರೆ.

  • ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು.3/4

    — H D Kumaraswamy (@hd_kumaraswamy) November 19, 2021 " class="align-text-top noRightClick twitterSection" data=" ">

ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿ ಗಡಿಯಲ್ಲಿ ಅನ್ನದಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತ್ತು. ಈ ವೇಳೆ, ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿದಿತ್ತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ, ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಹೇಳಿದ್ದಾರೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂದು ಹೆಚ್​ಡಿಕೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.