ETV Bharat / city

ಹಳೇ ಕಾಂಗ್ರೆಸ್​ಗೆ ಸಮಾಧಿ ಕಟ್ಟಿ ತಿಥಿ ಊಟ ಮಾಡಿದ್ದೀರಿ.. ಸಿದ್ದರಾಮಯ್ಯಗೆ ಹೆಚ್​ಡಿಕೆ ಟಾಂಗ್​ - ಸಿದ್ಧಸೂತ್ರದಾರ

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ: ಅಂದು ದೇಶ ಉಳಿಸಿದ ಕಾಂಗ್ರೆಸ್ ಬೇರೆ, ಈಗ ದೇಶವನ್ನು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್​ ಬೇರೆ. ಲೂಟಿ ಹೊಡೆಯೋದೆ ದೇಶ ಪ್ರೇಮವಾ?. ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ 5 ವರ್ಷದ ಆಡಳಿತದಲ್ಲಿ ಸುತ್ತಮುತ್ತಲಿನ ಪಟಾಲಂ ಹೊಡೆದ ಕೊಳ್ಳೆಯ ಲೆಕ್ಕ ಕೊಡಲೇ?, ಅರ್ಕಾವತಿ ರೀಡು ಹಗರಣ ತೆಗೆದರೆ ಮುಖ ಎಲ್ಲಿಟ್ಟುಕೊಳ್ಳುತ್ತೀರಿ? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

H D Kumaraswamy slams siddaramaiah
ಸಿದ್ದರಾಮಯ್ಯಗೆ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು
author img

By

Published : Aug 8, 2022, 1:21 PM IST

Updated : Aug 8, 2022, 2:30 PM IST

ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಪಕ್ಷದ ಕೊಡುಗೆ ಏನು? ಎಂದು ಕೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್​ಡಿಕೆ, ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ಧಸೂತ್ರದಾರನ ಕೊಡುಗೆ ಏನು? ಎಂದು ಕೇಳಿದ್ದಾರೆ.

ವಿಕಿಪೀಡಿಯ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದ್ದೀರಾ ಮಿಸ್ಟರ್ ಸಿದ್ದರಾಮಯ್ಯ? ಎಂದು ಟಾಂಗ್ ಕೊಟ್ಟಿರುವ ಹೆಚ್​ಡಿಕೆ, ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ?, ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

  • ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ @JanataDal_S ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ.
    ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? 1/14

    — H D Kumaraswamy (@hd_kumaraswamy) August 8, 2022 " class="align-text-top noRightClick twitterSection" data=" ">

ನೀವು ಕಾಂಗ್ರೆಸ್ ಸೇರಿದ್ದು 2006 ರಲ್ಲಿ. ಹೀಗಾಗಿ, ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ?, ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರ. ಆ ಪಕ್ಷದ ಮೂಲ ನಾಯಕರನ್ನೆಲ್ಲಾ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ?. ನಿಮಗೆ ಅದು ಬೇರೆ ಕೇಡು ಎಂದು ಲೇವಡಿ ಮಾಡಿದ್ದಾರೆ.

ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿ ಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ?, ಖಂಡಿತಾ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಕಾಂಗ್ರೆಸ್​ ಸಮಾಧಿ: ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ?, ನೀವು ಕದ್ದಮಾಲು ಹ್ಯೂಬ್ಲೆಟ್ ವಾಚ್ ಕಟ್ಟಿದಾಗಲೇ 1947ರ ಕಾಂಗ್ರೆಸ್​ಗೆ ಸಮಾಧಿ ಕಟ್ಟಿದಿರಿ. 5 ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ?, ಮಹಾತ್ಮ ಗಾಂಧಿ ಅವರ ಕಾಂಗ್ರೆಸ್ ಪಕ್ಷವನ್ನು ನೀವೆಲ್ಲಾ ಸೇರಿ ಎಂದೋ ಮುಗಿಸಿದಿರಿ. ಅದಕ್ಕೆ ಸಮಾಧಿಯೂ ಕಟ್ಟಿ ತಿಥಿ ಊಟವನ್ನೂ ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ: ಕೆ.ಆರ್.ರಮೇಶ್​ ಕುಮಾರ್​ ವ್ಯಂಗ್ಯ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೇಳಿದ ತಲೆ ತಲೆಮಾರುಗಳ ಲೂಟಿ ಕಾಂಗ್ರೆಸ್ ಮಾತ್ರವಷ್ಟೇ ಈಗ ಉಳಿದಿರುವುದು. ಗಾಂಧಿ ಹೆಸರೇಳಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಹೊಂಚು ಹಾಕುತ್ತಿದ್ದೀರಿ. ಇನ್ನೆಷ್ಟು ತಲೆಮಾರಿಗೆ ಆಗುವಷ್ಟು ಲೂಟಿ ಹೊಡೆಯಬೇಕು ಮಿಸ್ಟರ್ ಸಿದ್ದರಾಮಯ್ಯ?, ಅಧಿಕಾರಕ್ಕಾಗಿ ಸ್ವಾತಂತ್ರ್ಯ ಹೋರಾಟದ ಜಪವೇ? ನೇರವಾಗಿ ಕುರ್ಚಿ ಜಪವನ್ನೇ ಮಾಡಬಹುದಲ್ಲವೇ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಜೆಡಿಎಸ್ ಇನ್ನೊಂದು ಪಕ್ಷದ ಬಳಿ ಬೆಂಕಿ ಕಾಯಿಸಿಕೊಳ್ಳುವ ಪಕ್ಷ ಎನ್ನುತ್ತೀರಿ. ಆದರೆ, ನಿಮ್ಮನ್ನು ನಂಬಿದ್ದಕ್ಕೆ ನಮ್ಮ ಪಕ್ಷಕ್ಕೆ ನೀವೇ ಬೆಂಕಿ ಹಾಕಿದ್ದು ಮರೆತಿರಾ?, ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡು ಆಪ್ತರನ್ನೆಲ್ಲ ಮುಂಬೈಗೆ ಸಾಗುಹಾಕಿದ ಕತ್ತಲ ಕಿತಾಪತಿ ಮಾಡಿದ್ದು ಯಾರು? ಎಂದು ಕೇಳಿರುವ ಮಾಜಿ ಮುಖ್ಯಮಂತ್ರಿಗಳು, ಇಷ್ಟಕ್ಕೂ ತಾವೇನೂ ಮೂಲ ಕಾಂಗ್ರೆಸ್ಸಿಗರಲ್ಲ. ವಲಸೆ ಹೋಗಿ, ವಿಷ ಹುಳವಾಗಿ ಅಲ್ಲಿಗೆ ಕರೆದುಕೊಂಡು ಹೋದವರ ಕೈ ಕಚ್ಚಿದ್ದು, ಆಮೇಲೆ ನಿಮ್ಮಿಂದ ಆ ಪಕ್ಷ ಬಿಟ್ಟುಹೋದವರ ಪಟ್ಟಿ ಹನುಮನ ಬಾಲದಂತೆ ಬೆಳೆದದ್ದು ಗೊತ್ತಿಲ್ಲವೆ? ಎಂದು ಹಳೆಯದನ್ನು ಕೆದಕಿ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: 'ನನ್ನ ಕೈ ಹಿಡಿದು ಕೈ ಎತ್ತಿರಲಿಲ್ಲವೇ?': ಸಿದ್ದರಾಮಯ್ಯ- ಡಿಕೆಶಿ ಒಗ್ಗಟ್ಟು ಪ್ರದರ್ಶನಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯ

ಆಶ್ರಯ ಕೊಟ್ಟ ಮನೆಯಲ್ಲೇ ಗಳ ಇರಿದವರು ಯಾರು?, ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀವು ನಡೆಸುತ್ತಿರುವ ಷಡ್ಯಂತ್ರ ಇನ್ನೂ ನಿಂತಿಲ್ಲ, ಇನ್ನೊಬ್ಬರನ್ನು ಸೈಡಿಗೆ ತಳ್ಳಿ ಆಗಲೇ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದ್ದೀರಲ್ಲ ಮಿಸ್ಟರ್ ಸಿದ್ದರಾಮಯ್ಯ?, ಇದು ಸ್ವಾತಂತ್ರ್ಯ ಸಂಗ್ರಾಮವೋ ಅಥವಾ ಕರ್ಚಿಗಾಗಿ ಹೋರಾಟವೋ? ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಿಮ್ಮಂತಹ ರಾಜಕೀಯ ಭಸ್ಮಾಸುರರು ಇರುವ ಕಾಂಗ್ರೆಸ್ ಪಕ್ಷದ ಹತ್ತಿರಕ್ಕೆ ಬಂದವರೆಲ್ಲ ಸುಟ್ಟು ಭಸ್ಮವಾಗಿದ್ದಾರೆ. ನಮ್ಮ ಪಕ್ಷ ಇರಲಿ, ಪಕ್ಕದ ಮಹಾರಾಷ್ಟ್ರದಲ್ಲಿ ಶಿವಸೇನೆ ಗತಿ ಏನಾಯಿತು?, ಯುಪಿಎ-1 ಸರ್ಕಾರಕ್ಕೆ ಬೆಂಬಲ ಕೊಟ್ಟ ತಪ್ಪಿಗೆ 65 ಕ್ಷೇತ್ರ ಗೆದ್ದಿದ್ದ ಕಮ್ಯುನಿಸ್ಟರು ಈಗೆಲ್ಲಿದ್ದಾರೆ?, ನಿಮ್ಮ ಸಹವಾಸ ಮಾಡಿದವರಿಗೆಲ್ಲ ಇದೇ ಗತಿ! ಎಂದು ಪ್ರತಿಪಕ್ಷ ನಾಯಕರಿಗೆ ಹಳೆಯ ಕಥೆಗಳನ್ನು ನೆನಪಿಸಿದ್ದಾರೆ. ಅಧಿಕಾರದ ದುರಾಸೆಗೆ ಅನ್ಯ ಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ.

Last Updated : Aug 8, 2022, 2:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.