ಬೆಂಗಳೂರು : ಕೋವಿಡ್ ಹಿನ್ನೆಲೆ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಅಭಿಮಾನಿಗಳು, ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿಸೆಂಬರ್ 16ರಂದು ನನ್ನ ಜನ್ಮದಿನ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ-ತುರಾಯಿ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
-
ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. 2/4
— H D Kumaraswamy (@hd_kumaraswamy) December 14, 2021 " class="align-text-top noRightClick twitterSection" data="
">ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. 2/4
— H D Kumaraswamy (@hd_kumaraswamy) December 14, 2021ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. 2/4
— H D Kumaraswamy (@hd_kumaraswamy) December 14, 2021
ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ದೃಢ ಸಂಕಲ್ಪದೊಂದಿಗೆ ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ ಎಂದಿದ್ದಾರೆ.