ಬೆಂಗಳೂರು: ಚುನಾವಣೆಗೆ ಸಜ್ಜಾಗುತ್ತಿರುವ ಎರಡೂ ರಾಷ್ಟ್ರೀಯ ಪಕ್ಷಗಳು ಕರ್ನಾಟಕವನ್ನು ಒಡೆದು ಆಳುವ ಮೂಲಕ 'ಬ್ರಿಟಿಷ್ ನೀತಿ'ಯನ್ನು ಅನುಸರಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಶನಿವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಟ ಯತ್ನಗಳು ಕಳವಳಕಾರಿ ಎಂದಿದ್ದಾರೆ.
-
ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ. 9/10
— H D Kumaraswamy (@hd_kumaraswamy) April 17, 2022 " class="align-text-top noRightClick twitterSection" data="
">ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ. 9/10
— H D Kumaraswamy (@hd_kumaraswamy) April 17, 2022ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ. 9/10
— H D Kumaraswamy (@hd_kumaraswamy) April 17, 2022
ಧರ್ಮ-ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂತಹ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್ ಮೀಡಿಯಾ ಶೂರರ ಮೌನ ಅಪಾಯಕಾರಿ. ʼಅಲ್ಲದೇ, ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ. ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು ಎಂದು ವಿವರಿಸಿದ್ದಾರೆ.
-
ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. 1/10
— H D Kumaraswamy (@hd_kumaraswamy) April 17, 2022 " class="align-text-top noRightClick twitterSection" data="
">ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. 1/10
— H D Kumaraswamy (@hd_kumaraswamy) April 17, 2022ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. 1/10
— H D Kumaraswamy (@hd_kumaraswamy) April 17, 2022
ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್ ಆಯುಕ್ತರು ಹಾಗೂ ಇಡೀ ಪೊಲೀಸ್ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರ್ಕಾರದ ಘೋರ ವೈಫಲ್ಯ. ಬಿಗಿ ಕ್ರಮ ಕೈಗೊಳ್ಳುವ ಬದಲಿಗೆ ಸರ್ಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂತಹ ಘಟನೆಗಳಿಗೆ ಕಾರಣ ಎಂದು ಹೆಚ್ಡಿಕೆ ದೂರಿದರು.
ಇದನ್ನೂ ಓದಿ: ಶಾಂತಿ, ಸೌಹಾರ್ದತೆ, ಹೊಂದಾಣಿಕೆಯೇ ಇಸ್ಲಾಂ ಧರ್ಮ.. ನ್ಯಾಯಯುತ ಹೋರಾಟ ಮಾಡಿ, ನ್ಯಾಯ ಪಡೆಯಬೇಕಿತ್ತು.. ಮುತಾಲಿಕ್