ETV Bharat / city

ಆಯುಷ್ ವೈದ್ಯರ ಸಾಮೂಹಿಕ ರಾಜೀನಾಮೆ: ಸಮಸ್ಯೆ ಗಂಭೀರವಾಗಿ ಪರಿಗಣಿಸಲು ಹೆಚ್​​ಡಿಕೆ ಒತ್ತಾಯ - ayush doctors mass resignation

ರಾಜ್ಯದ ಸುಮಾರು 2000 ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಮಸ್ಯೆಯನ್ನು ಪರಿಹರಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

HD Kumaraswamy tweet
ಹೆಚ್​​ಡಿಕೆ ಟ್ವೀಟ್​
author img

By

Published : Jul 17, 2020, 5:15 PM IST

ಬೆಂಗಳೂರು: ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯದ ಸುಮಾರು 2000 ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರೊಂದಿಗೆ ಮಾತುಕತೆ ನಡೆಸಿ ಬಿಕ್ಕಟ್ಟು ಪರಿಹರಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

HD Kumaraswamy tweet
ಹೆಚ್​​ಡಿಕೆ ಟ್ವೀಟ್​

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್ ವೈದ್ಯರಿಗೆ ಮಾಸಿಕ 20,000 ರೂ., ಅಲೋಪತಿ ವೈದ್ಯರಿಗೆ ಮಾಸಿಕ 60,000 ರೂ. ವೇತನ ನೀಡುತ್ತಿರುವುದು ತಾರತಮ್ಯ ಎಂದು ಆಯುಷ್ ವೈದ್ಯರು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರ, ಆಯುಷ್ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸಬೇಕು ಎಂದು ಸಲಹೆ ನೀಡಿದ್ದಾರೆ.

HD Kumaraswamy tweet
ಹೆಚ್​​ಡಿಕೆ ಟ್ವೀಟ್​

ಯಾವುದೇ ಕಾರಣಕ್ಕೂ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ಹೊಣೆಗೇಡಿತನ ಪ್ರದರ್ಶಿಸಬಾರದು. ಅಲೋಪತಿ ಮತ್ತು ಆಯುಷ್ ವೈದ್ಯರ ನಡುವಣ ಅಜಗಜಾಂತರ ವೇತನ ತಾರತಮ್ಯ ಸಹಜವಾಗಿಯೇ ಕಂದಕ ಸೃಷ್ಟಿಸಿದೆ. ಸರ್ಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ತುಂಬಾ ಕಷ್ಟವಾಗುತ್ತದೆ. ಸಮಸ್ಯೆ ಬಿಗಡಾಯಿಸುವ ಮುನ್ನ ಸರ್ಕಾರ ಎಚ್ಚರ ವಹಿಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.