ETV Bharat / city

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ - ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪ

ಬಿಎಸ್​​ವೈ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೂರು: ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ, ಮೊಮ್ಮಗ ಶಶಿದರ್ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಹಾಲಿ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್, ಕೆ ರವಿ ಮತ್ತು ವಿರೂಪಾಕ್ಷಪ್ಪ ವಿರುದ್ಧ ವಿಶೇಷ ಕೋರ್ಟ್​ಗೆ ದೂರು ನೀಡಲಾಗಿತ್ತು.

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್
ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್
author img

By

Published : Sep 7, 2022, 7:35 PM IST

ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್​, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ.

ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದರು. ಆರೋಪದ ಹಿನ್ನೆಲೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಅವರು ನ್ಯಾಯಾಲಯದಲ್ಲಿ ಕೋರಿದ್ದರು.

ಏನಿದು ಪ್ರಕರಣ: ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ, ಮೊಮ್ಮಗ ಶಶಿದರ್ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಹಾಲಿ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್, ಕೆ ರವಿ ಮತ್ತು ವಿರೂಪಾಕ್ಷಪ್ಪ ವಿರುದ್ಧ ಕೋರ್ಟ್​ಗೆ ದೂರು ನೀಡಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಜುಲೈ 8, 2021 ರಂದು ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯವು ದೂರು ವಜಾಗೊಳಿಸಿತ್ತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿದಾರರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿದ್ದರು.. ಇಂದು ಈ ಬಗ್ಗೆ ತೀರ್ಪು ಪ್ರಕಟಿಸಿದ್ದಾರೆ.

ಅರ್ಜಿಯನ್ನು ಭಾಗಶಃ ಅನುಮತಿಸಿರುವ ಹೈಕೋರ್ಟ್, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದೆ. ದೂರನ್ನು ಹೊಸದಾಗಿ ವಿಚಾರಣೆ ಮಾಡಲು ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಿದೆ. ವಿಶೇಷ ನ್ಯಾಯಾಲಯವು ಖಾಸಗಿ ದೂರಿನ ಅನ್ವಯ ವಿಚಾರಣೆಯನ್ನು ನಡೆಸಬಹುದು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮಂಜೂರಾತಿಯನ್ನು ತಿರಸ್ಕರಿಸುವುದು ವಿಚಾರಣೆಗೆ ಅಡ್ಡಿ ಆಗುವುದಿಲ್ಲ. ವಿಚಾರಣೆಯನ್ನು ಮುಂದುವರಿಸಿ ಎಂದು ನಿರ್ದೇಶನ ನೀಡಲಾಗಿದೆ.

ದೂರಿನಲ್ಲಿರುವುದೇನು?: ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಪರವಾಗಿ ಬಿಡಿಎಯಿಂದ ವರ್ಕ್ ಆರ್ಡರ್ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಯಡಿಯೂರಪ್ಪ ಪರವಾಗಿ ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಕಾಶ್ ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ, ವಿಜಯೇಂದ್ರ, ಶಶಿದರ್ ಮರಡಿ ಮತ್ತು ಸಂಜಯ್ ಶ್ರೀಗಳು ಶೆಲ್ ಕಂಪನಿಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅರ್ಜಿದಾರರು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನು ಓದಿ:ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.