ETV Bharat / city

ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ನೀತಿ ರೂಪಿಸದ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್! - policy on transfer of IAS IPS officers

ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ನಿಯಮ ರೂಪಿಸದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

HC notice to govt
ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
author img

By

Published : Mar 30, 2022, 7:23 AM IST

ಬೆಂಗಳೂರು: ಐಎಎಸ್, ಐಪಿಎಸ್ ಸೇರಿದಂತೆ ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ನಿಯಮ ರೂಪಿಸದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಕುರಿತಂತೆ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.

ವಿವರಣೆ ನೀಡುವಂತೆ ಸರ್ಕಾರಕ್ಕೆ ತಾಕೀತು: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶ ನೀಡಿ ಹಲವು ವರ್ಷ ಕಳೆದರೂ ಈವರೆಗೂ ಏಕೆ ರಾಜ್ಯದಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ನಾಗರಿಕ ಸೇವಾ ಮಂಡಳಿ ರಚನೆ ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ. ಅರ್ಜಿದಾರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿದರು.

ಸುಪ್ರೀಂಕೋರ್ಟ್ ನಿರ್ದೇಶನ: ಐಎಎಸ್, ಐಪಿಎಸ್ ಸೇರಿದಂತೆ ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳು ದಕ್ಷತೆ ಹಾಗೂ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಬೇಕು. ಆದರೆ, ವರ್ಗಾವಣೆಗೆ ಕನಿಷ್ಠ ಅವಧಿ ನಿಗದಿ ಮಾಡದ ಕಾರಣ ರಾಜಕಾರಣಿಗಳು ಇವರನ್ನು ಮನಬಂದಂತೆ ವರ್ಗಾವಣೆ ಮಾಡುತ್ತಿದ್ದಾರೆ. ಇದು ಭ್ರಷ್ಟಾಚಾರಕ್ಕೂ ದಾರಿಯಾಗಿದೆ.

ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ ಸೇವಾವಧಿ ನಿಯಮ ಜಾರಿಗೊಳಿಸುವಂತೆ ಹಾಗೂ ವರ್ಗಾವಣೆ ಪ್ರಕ್ರಿಯೆ ನಡೆಸಲು ಕೇಂದ್ರ ನಾಗರಿಕ ಸೇವಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ 2013ರ ಅಕ್ಟೋಬರ್ 30ರಂದು ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ.

ಇದನ್ನೂ ಓದಿ: ಸಮಾಜಕ್ಕೆ ಮರಳಿ ನೀಡುವ ಕಾರ್ಯ ಪ್ರೇರಣಾದಾಯಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶರತ್ ನಡುವಿನ ವರ್ಗಾವಣೆ ವ್ಯಾಜ್ಯ ವಿಚಾರಣೆ ನಡೆಸಿದ್ದ ಹೈಕೋರ್ಟ್, 2 ತಿಂಗಳಲ್ಲಿ ಸಿಎಸ್‌ಬಿ ರಚಿಸುವಂತೆ 2021ರ ಜುಲೈ 8ರಂದೇ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಆದರೆ, ರಾಜ್ಯ ಸರ್ಕಾರ ಸುಪ್ರೀಂ ಹಾಗೂ ಹೈಕೋರ್ಟ್ ಆದೇಶಗಳನ್ನು ಈವರೆಗೂ ಪಾಲಿಸಿಲ್ಲ. ಹಾಗಾಗಿ, ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ ಅವಧಿ ನಿಗದಿಪಡಿಸುವ ಸಲುವಾಗಿ ನೀತಿ ರೂಪಿಸಲು ಹಾಗೂ ಮಂಡಳಿ ರಚಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.