ETV Bharat / city

ವಿಜಯಪುರ ಪಾಲಿಕೆಗೆ ಚುನಾವಣೆ ನಡೆಸುವಂತೆ ಸರ್ಕಾರ, ಚು. ಆಯೋಗಕ್ಕೆ ಹೈಕೋರ್ಟ್ ಆದೇಶ

ಸರ್ಕಾರ ಮೀಸಲು ಅಧಿಸೂಚನೆ ಹೊರಡಿಸಿದ 3 ತಿಂಗಳೊಳಗೆ ಮತದಾರರ ಪಟ್ಟಿ ಹೊಸದಾಗಿ ಸಿದ್ಧಪಡಿಸಿ ಪ್ರಕಟಿಸಬೇಕು. ಮತದಾರರ ಪಟ್ಟಿ ಪ್ರಕಟಗೊಂಡ 45 ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ..

ಹೈಕೋರ್ಟ್ ಆದೇಶ
ಹೈಕೋರ್ಟ್ ಆದೇಶ
author img

By

Published : Dec 10, 2020, 9:41 PM IST

ಬೆಂಗಳೂರು : ವಿಜಯಪುರ ಮಹಾನಗರ ಪಾಲಿಕೆಗೆ ಶೀಘ್ರವೇ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ.

ವಿಜಯಪುರ ಪಾಲಿಕೆಗೆ ಚುನಾವಣೆ ನಡೆಸುವಂತೆ ಕೋರಿ ಸ್ಥಳೀಯ ಆನಂದ್ ಎಂಬುವರು ಸೇರಿ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ಮಾಡಿದೆ.

ಪೀಠ ತನ್ನ ಆದೇಶದಲ್ಲಿ ಮುಂದಿನ ಮೂರು ವಾರಗಳಲ್ಲಿ ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ಮರು ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅದಾದ 2 ತಿಂಗಳಲ್ಲಿ ಅಂತಿಮ ಮೀಸಲು ಪಟ್ಟಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಹಾಗೆಯೇ, ಸರ್ಕಾರ ಮೀಸಲು ಅಧಿಸೂಚನೆ ಹೊರಡಿಸಿದ 3 ತಿಂಗಳೊಳಗೆ ಮತದಾರರ ಪಟ್ಟಿ ಹೊಸದಾಗಿ ಸಿದ್ಧಪಡಿಸಿ ಪ್ರಕಟಿಸಬೇಕು. ಮತದಾರರ ಪಟ್ಟಿ ಪ್ರಕಟಗೊಂಡ 45 ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ : ವಿಜಯಪುರ ನಗರಸಭೆಯನ್ನು 2013ರಲ್ಲಿ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದರಂತೆ ನಗರಸಭೆ ಸದಸ್ಯರನ್ನು ಪಾಲಿಕೆ ಸದಸ್ಯರಾಗಿ ಪರಿಗಣಿಸಲಾಗಿತ್ತು. ಇವರ ಅವಧಿ 2019ರ ಆಗಸ್ಟ್​ಗೆ ಪೂರ್ಣಗೊಂಡಿದ್ದರಿಂದ ಸರ್ಕಾರ ಬೆಳಗಾವಿಯ ಪ್ರಾದೇಶಿಕ ಆಯುಕ್ತರನ್ನು ಪಾಲಿಕೆಯ ಆಡಳಿತಾಧಿಕಾರಿಯಾಗಿ ನೇಮಿಸಿತ್ತು.
ಮಹಾನಗರ ಪಾಲಿಕೆಯ ವಾರ್ಡ್‌ಗಳಿಗೆ ಮೀಸಲು ನಿಗದಿಪಡಿಸಿ ಸರ್ಕಾರವು 2019ರ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಕೆಲವರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮೀಸಲು ಅಧಿಸೂಚನೆ ಹಿಂಪಡೆದು ಹೊಸದಾಗಿ ಅಧಿಸೂಚನೆ ಹೊರಡಿಸಿ ಚುನಾವಣೆ ನಡೆಸುವುದಾಗಿ ಸರ್ಕಾರ ಹೈಕೋರ್ಟ್‌ಗೆ ಭರವಸೆ ನೀಡಿತ್ತು. ಆದರೆ, ಸರ್ಕಾರ ಹೊಸದಾಗಿ ಮೀಸಲು ಅಧಿಸೂಚನೆ ಹೊರಡಿಸಲಿಲ್ಲ. ಇದರಿಂದಾಗಿ ಚುನಾವಣಾ ಆಯೋಗಕ್ಕೆ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ.

ಈ ಹಿನ್ನೆಲೆ ವಿಜಯಪುರ ಮಹಾನಗರ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕೆಂದು ಕೋರಿ 2019ರ ಡಿ.17ರಂದು ಬೆಂಗಳೂರಿನ ಹೈಕೋರ್ಟ್ ಪ್ರಧಾನ ಪೀಠದಲ್ಲಿ ಆನಂದ್ ಸೇರಿ ವಿಜಯಪುರ ನಗರದ ಐದು ಮಂದಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.