ಬೆಂಗಳೂರು : ಹಿರಿಯ ರೈತಪರ ಹೋರಾಟಗಾರರು, ಮಾಜಿ ಸಚಿವ ಹಾಗೂ ಮಾಜಿ ಸಂಸದ ಜಿ.ಮಾದೇಗೌಡರ ನಿಧನಕ್ಕೆ ಸಿಎಂ ಬಿಎಸ್ವೈ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ಗಣ್ಯರ ಸಂತಾಪ ಸೂಚಿಸಿದ್ದಾರೆ. ಗಾಂಧಿವಾದಿಯಾಗಿ, ಗಾಂಧಿ ಅವರ ತತ್ವಾದರ್ಶಗಳನ್ನು ಜೀವನದುದ್ದಕ್ಕೂ ಪಾಲಿಸಿದ ಮಾದೇಗೌಡರು, ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಸಿಎಂ ಸ್ಮರಿಸಿದ್ದಾರೆ.
ಅವರ ನಿಧನದಿಂದ ರೈತ ಹಾಗೂ ಜನಪರ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕಂಬನಿ ಮಿಡಿದ ಮಾಜಿ ಪ್ರಧಾನಿ : ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರು, ರೈತ ಹೋರಾಟಗಾರರು, ಭಾರತಿ ವಿದ್ಯಾ ಸಂಸ್ಥೆಯ ಜನಕ, ಮಾಜಿ ಸಚಿವರು ಮತ್ತು ಮಾಜಿ ಸಂಸದರು ಆಗಿದ್ದ ಜಿ. ಮಾದೇಗೌಡರವರು ಚಿರನಿದ್ರೆಗೆ ಜಾರಿದ ಸುದ್ದಿ ಅತೀವ ದುಃಖ ತಂದಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.
ರಾಜ್ಯಕ್ಕೆ ತಮ್ಮ ನಿಸ್ವಾರ್ಥ ಸೇವೆ ಮತ್ತು ಹೋರಾಟದ ಛಲ ಮುಂಬರುವ ಪೀಳಿಗೆಗಳಿಗೆ ಮಾದರಿಯಾಗಿ ಉಳಿಯಲಿದೆ. ತಮ್ಮ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ತಮ್ಮ ಕುಟುಂಬದವರಿಗೆ ಭಗವಂತ ಕರುಣಿಸಲಿ. ತಮ್ಮ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
-
ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರು, ರೈತ ಹೋರಾಟಗಾರರು, ಭಾರತಿ ವಿದ್ಯಾ ಸಂಸ್ಥೆಯ ಜನಕರು, ಮಾಜಿ ಸಚಿವರು ಮತ್ತು ಸಂಸದರೂ ಆಗಿದ್ದ ಶ್ರೀ ಜಿ ಮಾದೇಗೌಡರವರು ಚಿರನಿದ್ರೆಗೆ ಜಾರಿದ ಸುದ್ದಿ ಅತೀವ ದುಃಖ ತಂದಿದೆ. 1/2 pic.twitter.com/Xb523frYjQ
— H D Devegowda (@H_D_Devegowda) July 17, 2021 " class="align-text-top noRightClick twitterSection" data="
">ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರು, ರೈತ ಹೋರಾಟಗಾರರು, ಭಾರತಿ ವಿದ್ಯಾ ಸಂಸ್ಥೆಯ ಜನಕರು, ಮಾಜಿ ಸಚಿವರು ಮತ್ತು ಸಂಸದರೂ ಆಗಿದ್ದ ಶ್ರೀ ಜಿ ಮಾದೇಗೌಡರವರು ಚಿರನಿದ್ರೆಗೆ ಜಾರಿದ ಸುದ್ದಿ ಅತೀವ ದುಃಖ ತಂದಿದೆ. 1/2 pic.twitter.com/Xb523frYjQ
— H D Devegowda (@H_D_Devegowda) July 17, 2021ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರು, ರೈತ ಹೋರಾಟಗಾರರು, ಭಾರತಿ ವಿದ್ಯಾ ಸಂಸ್ಥೆಯ ಜನಕರು, ಮಾಜಿ ಸಚಿವರು ಮತ್ತು ಸಂಸದರೂ ಆಗಿದ್ದ ಶ್ರೀ ಜಿ ಮಾದೇಗೌಡರವರು ಚಿರನಿದ್ರೆಗೆ ಜಾರಿದ ಸುದ್ದಿ ಅತೀವ ದುಃಖ ತಂದಿದೆ. 1/2 pic.twitter.com/Xb523frYjQ
— H D Devegowda (@H_D_Devegowda) July 17, 2021
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ
ರೈತ ಹೋರಾಟಗಾರ ಜಿ. ಮಾದೇಗೌಡರ ನಿಧನದ ಸಂಗತಿ ತೀವ್ರ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
-
ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ. pic.twitter.com/jOP9pPXWjF
— H D Kumaraswamy (@hd_kumaraswamy) July 17, 2021 " class="align-text-top noRightClick twitterSection" data="
">ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ. pic.twitter.com/jOP9pPXWjF
— H D Kumaraswamy (@hd_kumaraswamy) July 17, 2021ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ. pic.twitter.com/jOP9pPXWjF
— H D Kumaraswamy (@hd_kumaraswamy) July 17, 2021
ಬಿಜೆಪಿ ರಾಜ್ಯಾಧ್ಯಕ್ಷರಿಂದ ಸಂತಾಪ :
ರಾಜ್ಯದ ಹಿರಿಯ ರಾಜಕಾರಣಿ ಮಂಡ್ಯದ ಜಿ. ಮಾದೇಗೌಡ ಅವರು ನಿಧನರಾಗಿದ್ದಾರೆ. ಭಾರತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಿದ್ದರು. ಜನಪರ, ರೈತಪರ ಹೋರಾಟಗಳಲ್ಲಿ ಮುಂದಿರುತ್ತಿದ್ದ ಮಾದೇಗೌಡರ ಅಪಾರ ಅಭಿಮಾನಿಗಳು ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಸಚಿವರಿಂದ ಸಂತಾಪ :
ಡಿಸಿಎಂ ಅಶ್ವತ್ಥ್ ನಾರಾಯಣ್, ಸಚಿವ ಅರವಿಂದ ಲಿಂಬಾವಳಿ, ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಕಾಂಗ್ರೆಸ್ ನಾಯಕರ ಸಂತಾಪ:
ಜಿ. ಮಾದೇಗೌಡ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರಸಂತಾಪ ಸೂಚಿಸಿದ್ದಾರೆ. ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಸಂತಾಪ ಸಂದೇಶದಲ್ಲಿ, ಕಾವೇರಿ ನದಿ ನೀರು ಮತ್ತು ಕನ್ನಡ ನಾಡಿನ ನೆಲ, ಜಲದ ವಿಚಾರದಲ್ಲಿ ರಾಜೀರಹಿತ ಹೋರಾಟ ನಡೆಸುತ್ತಿದ್ದ ರೈತ ಮತ್ತು ಶ್ರಮಿಕರ ಒಡನಾಡಿ ಜಿ.ಮಾದೇಗೌಡ ಅವರು ನನ್ನ ಅತ್ಯಂತ ಆತ್ಮೀಯರು. ಇವರ ನಿಧನ ನನಗೆ ಅಪಾರ ದುಃಖ ತಂದಿದೆ. ಜಿ. ಮಾದೇಗೌಡರು ತಮ್ಮ 94ನೇ ವಯಸ್ಸಿನಲ್ಲಿ ನಿಧನರಾಗಿದ್ದು ಉಸಿರಿರುವವರೆಗೂ ಹೋರಾಟ ಮನೋಭಾವವನ್ನು ಬಿಟ್ಟಿರಲಿಲ್ಲ. ತಮ್ಮ ಬದುಕಿನ ಕೊನೆಯವರೆಗೂ ಕ್ರಿಯಾಶೀಲರಾಗಿದ್ದ ಮಾದೇಗೌಡರು ಜಿಲ್ಲೆಯ ರೈತರ ಹಿತಕ್ಕೆ ಧಕ್ಕೆ ಬಂದಾಗೆಲ್ಲ ಪ್ರತಿಭಟನೆಯ ಧ್ವನಿಯಾಗಿದ್ದರು. ಅಗತ್ಯ ಬಿದ್ದಾಗಲೆಲ್ಲಾ ಸರ್ಕಾರಕ್ಕೆ ಸಲಹೆಗಳನ್ನೂ ನೀಡುತ್ತಿದ್ದರು ಎಂದಿದ್ದಾರೆ.
ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ :
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂಸದ ಡಿ.ಕೆ. ಸುರೇಶ್, ಮಾಜಿ ಸಂಸದರು ಸೇರಿದಂತೆ ಹಲವು ಮುಖಂಡರು ಮಾದೇಗೌಡರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.