ETV Bharat / city

ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಶಕ್ತಿಗಳನ್ನು ನಿರ್ಮೂಲನೆ ಮಾಡಿ : ಸರ್ಕಾರಕ್ಕೆ ಹೆಚ್​ಡಿಕೆ ಆಗ್ರಹ - MES members arrest news

ಬೆಳಗಾವಿಯಲ್ಲಿ ತಡರಾತ್ರಿ ಕಿಡಿಗೇಡಿಗಳು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆಯಾದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
author img

By

Published : Dec 18, 2021, 12:19 PM IST

ಬೆಂಗಳೂರು: ಬೆಳಗಾವಿಯಲ್ಲಿ ತಡರಾತ್ರಿ ಕಿಡಿಗೇಡಿಗಳು ನಡೆಸಿರುವ ದಾಂಧಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಇಂತಹ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ದುರುಳರ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕು. ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕುಂದಾ ತಡರಾತ್ರಿ ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆಯಾದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ, ಖಂಡನೀಯ ಎಂದಿದ್ದಾರೆ.

ಓದಿ: ರಮಾಕಾಂತ್ ಕೊಂಡೂಸ್ಕರ್, ಶುಭಂ ಶೆಳ್ಕೆ ಸೇರಿ 27 ಜನರು ಹಿಂಡಲಗಾ ಜೈಲಿಗೆ.. ಬೆಳಗಾವಿಯಲ್ಲಿ ನಿಷೇಧಾಜ್ಞೆ

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯವನ್ನು ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಕಿಡಿಗೇಡಿಗಳನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರ ಇರುವಂತಿದೆ ಎಂದು ಹೆಚ್​ಡಿಕೆ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿದ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತಾ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಉದ್ಧಟತನ ಮೆರೆಯುವವರನ್ನು ಕೂಡಲೇ ಬೇಟೆಯಾಡಿ ಇನ್ನೆಂದು ಇಂತಹ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು. ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಓದಿ: MES ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬೊಮ್ಮಾಯಿ ಖಡಕ್​ ಸೂಚನೆ

ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಹೆಚ್​ಡಿಕೆ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.