ETV Bharat / city

ಜೆಡಿಎಸ್ ಮುಗಿಸಲು ಕಾಂಗ್ರೆಸ್ ನಾಯಕರ ಹುನ್ನಾರ ನಡೆಯುತ್ತಿದೆ : ಹೆಚ್​ಡಿಕೆ ಆರೋಪ

ಜೆಡಿಎಸ್ ಮುಗಿಸಲು ಕಾಂಗ್ರೆಸ್ ನಾಯಕರಿಂದ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ..

HD Kumaraswamy
ಹೆಚ್. ಡಿ. ಕುಮಾರಸ್ವಾಮಿ
author img

By

Published : Nov 17, 2021, 4:44 PM IST

Updated : Nov 17, 2021, 7:09 PM IST

ಬೆಂಗಳೂರು : ಜೆಡಿಎಸ್‍ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಹಳೇ ಮೈಸೂರು ಭಾಗದ ನಮ್ಮ ಶಾಸಕರೊಬ್ಬರಿಗೆ 12 ಬಾರಿ ಕರೆ ಮಾಡಿದ ಮಾಜಿ ಸಿಎಂ ಒಬ್ಬರು, ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ.

9 ದಿನಗಳ ಜನತಾ ಸಂಗಮ ಕಾರ್ಯಾಗಾರ ಇಂದು ಸಂಜೆ ಮುಕ್ತಾಯವಾದ ನಂತರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ದುರ್ಬಲಗೊಳಿಸಲು ಕಾಂಗ್ರೆಸ್​ ನಾಯಕರು ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ.

ಕ್ಷೇತ್ರಗಳಲ್ಲಿ ಕೊಂಚ ಬಲ ಇಟ್ಟುಕೊಂಡಿರುವ ಶಾಸಕರನ್ನು, ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತ ಅಭ್ಯರ್ಥಿಗಳನ್ನು ಅವರು ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮವರ ಬ್ರೈನ್ ವಾಶ್ ಮಾಡುತ್ತಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಹೈಜಾಕ್ ಆಪರೇಷನ್ ನಡೆಯುತ್ತಿದೆ. ಏನು ತೀರ್ಮಾನ ಮಾಡಿದಿರಿ ಎಂದು ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಕಾಲ್ ರೆಕಾರ್ಡ್ ಇದೆ ಎಂದು ಹೇಳಿದರು.

ಕಾಂಗ್ರೆಸ್‌ ನಾಯಕರ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿರುವುದು..

ಯಾರೊಬ್ಬರ ಹೆಸರು ಹೇಳದೆಯೇ ಟೀಕಾ ಪ್ರಹಾರ ನಡೆಸಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಆಗಿದ್ದವರೊಬ್ಬರು ನಮ್ಮ ಶಾಸಕರು, ಮುಖಂಡರಿಗೆ ದೂರವಾಣಿ ಕರೆ ಮಾಡಿ ಸತತವಾಗಿ ಬ್ರೈನ್ ವಾಶ್ ಮಾಡುತ್ತಿದ್ದಾರೆ. ಸಿಎಂ ಆಗಿದ್ದವರು, ಪುನಃ ಸಿಎಂ ಆಗಲು ಕನಸು ಕಾಣುತ್ತಿರುವವರು ಈ ಕೆಲಸ ಮಾಡುತ್ತಿದ್ದಾರೆ.

ಪದೇಪದೆ ಕರೆ ಮಾಡಿ, ಅವರ ತಲೆ ಕೆಡಿಸಲು ಯತ್ನಿಸುತ್ತಿದ್ದಾರೆ. ಅಲ್ಲದೇ, ಒಬ್ಬರಿಗೆ 12 ಬಾರಿ ಕರೆ ಮಾಡಿ ಏನು ತೀರ್ಮಾನ ಮಾಡಿದ್ರಿ ಅಂತಾ ಕೇಳುತ್ತಿದ್ದಾರೆ. ಇದನ್ನು ಸ್ವತಃ ನನ್ನ ಆತ್ಮೀಯ ಶಾಸಕರೊಬ್ಬರು ನನಗೆ ಆ ಮಾಜಿ ಮುಖ್ಯಮಂತ್ರಿ ಮಾಡಿರುವ ದೂರವಾಣಿ ಕರೆಯ ಲಿಸ್ಟ್ ಅನ್ನು ತೋರಿಸಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಜೊತೆ ನಾವು ಸರ್ಕಾರ ಮಾಡಿದ ಬಳಿಕ ನಮ್ಮವರ ಬ್ರೈನ್ ವಾಶ್ ಮಾಡಲಾಗುತ್ತಿದೆ. ಇದರ ಬಗ್ಗೆ ನನಗೆ ಯಾವುದೇ ಆತಂಕ‌ ಇಲ್ಲ. ನಮಗೆ ನಮ್ಮ ಪಕ್ಷದ ಶಾಸಕರು, ಕಾರ್ಯಕರ್ತರ ಪಡೆ ಇದೆ. ಆದರೆ, ಆ ಪಕ್ಷಕ್ಕೆ ನಾಯಕರ ಕೊರತೆ ಇದೆ. ಬೇರೆ ಗತಿ ಇಲ್ಲದೇ ನಮ್ಮ ಪಕ್ಷದವರಿಗೆ ಗಾಳ ಹಾಕುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷ ಮತ್ತು ನಮ್ಮ ಬಗ್ಗೆ ಲಘು ಮಾತು ಬೇಡ : ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅವರು ಅಲ್ಲಿಗೆ ಹೋಗಲಿ. ಆದರೆ, ಹೋಗುವ ಮುನ್ನ ಅಥವಾ ಹೋದ ಮೇಲೆ ನಮ್ಮ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುವುದು ಬೇಡ. ಇಲ್ಲಿಂದ ಎಲ್ಲ ಶಕ್ತಿ ಪಡೆದುಕೊಂಡು ನಮ್ಮ ಬಗ್ಗೆ ಮಾತನಾಡುವುದು ಬೇಡ.

ಯಾರು ಪಕ್ಷ ಬಿಡಲು ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೋ ಅಥವಾ ಯಾರು ಎರಡೂ ಕಾಲುಗಳನ್ನು ಆಚೆ ಇಟ್ಟಿದ್ದಾರೋ, ಅವರಿಗೆ ಎಲ್ಲಿ ಭವಿಷ್ಯ ಇದೆ ಎಂದು ಎನಿಸುತ್ತದೆಯೋ ಅವರು ಅಲ್ಲಿಗೆ ಹೋಗಲಿ. ಅವರು ಪಕ್ಷ ಬಿಟ್ಟು ಹೋಗುತ್ತಾರೆ ಎಂದು ನಾವು ಅಳುತ್ತಾ ಕೂರಲು ಆಗಲ್ಲ. ಆದರೂ ಕೆಲವರನ್ನು ಮನವೊಲಿಸಲು ಸಾಧ್ಯವಿದ್ದರೆ ಮಾಡುತ್ತೇವೆ. ಆ ಪ್ರಯತ್ನವನ್ನು ನಾವು ಕೈ ಬಿಟ್ಟಿಲ್ಲ ಎಂದರು.

ಬೆಂಗಳೂರು ನಗರಕ್ಕೂ ಕೂಡ ಪ್ರತ್ಯೇಕ ಯೋಜನೆ ನೀಡಲಾಗುತ್ತದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಜನರ ಮುಂದೆ ಮುಂದಿನ ಯೋಜನೆಗಳ ಬಗ್ಗೆ ಸಂಕ್ರಾಂತಿ ವೇಳೆಗೆ ತಿಳಿಸುತ್ತೇನೆ ಎಂದರು.

ಇದನ್ನೂ ಓದಿ: ಅಡ್ಡಿಯೂ ಇಲ್ಲ,ಪಡ್ಡಿಯೂ ಇಲ್ಲ.. ನನ್ನ ಮಾತು ಮೊಟಕುಗೊಳಿಸುವ ಪ್ರಯತ್ನ ನಡೆದಿಲ್ಲ: ಸಿದ್ದರಾಮಯ್ಯ

ನಾವು ಹೇಳಿದ ಸೂಚನೆ ಪಾಲಿಸಬೇಕು ಅಂತಾ ಪಕ್ಷದ ಪದಾಧಿಕಾರಿಗಳಿಗೆ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲೂ ಕಾರ್ಯಕ್ರಮ ಇರಲಿವೆ.‌ ಇನ್ಮುಂದೆ ಬೇರೆ ಜಿಲ್ಲೆಯವರನ್ನು ಇಲ್ಲಿಗೆ ಕರೆದು ಸಭೆ ಮಾಡುವುದಿಲ್ಲ. ಆಯಾ ಜಿಲ್ಲೆಗಳಿಗೇ ತೆರಳಿ ಸಭೆ ಮಾಡಲಾಗುವುದು ಎಂದು ಹೆಚ್‌ಡಿಕೆ ತಿಳಿಸಿದರು.

Last Updated : Nov 17, 2021, 7:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.