ETV Bharat / city

'ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ.. ಆಪರೇಷನ್‌ ಕಮಲದ ಮೂಲಕ ಸಂವಿಧಾನ ಶಿರಚ್ಛೇದ.. ಇದು ಸೋಗಲಾಡಿತನವಲ್ಲವೇ..' - ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

"ಕುಟುಂಬ ಆಧಾರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು." ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಉಪದೇಶವಿದು. ವಾಸ್ತವ ಗುರುತಿಸಿ, ಬಿಜೆಪಿ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ..

HD Kumaraswamy ,  PM Modi
ಹೆಚ್.ಡಿ.ಕುಮಾರಸ್ವಾಮಿ,ಪ್ರಧಾನಮಂತ್ರಿ ನರೇಂದ್ರ ಮೋದಿ
author img

By

Published : May 27, 2022, 2:44 PM IST

Updated : May 27, 2022, 8:02 PM IST

ಬೆಂಗಳೂರು : ಕುಟುಂಬ ಆಧಾರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು ಎಂದು ನಿನ್ನೆ(ಗುರುವಾರ) ಹೈದರಾಬಾದ್​​ನಲ್ಲಿ ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

  • "ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು."
    ಪ್ರಧಾನಿ @narendramodi ಅವರ ಹೊಸ ಉಪದೇಶವಿದು. ವಾಸ್ತವ ಗುರುತಿಸಿ, @BJP4India ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ.
    1/17

    — H D Kumaraswamy (@hd_kumaraswamy) May 27, 2022 " class="align-text-top noRightClick twitterSection" data=" ">

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ಅವರ ಹೇಳಿಕೆ ಕರ್ನಾಟಕದಲ್ಲಿ ಬಿಜೆಪಿ ನಡೆಸಿದ ಆಪರೇಷನ್ ಕಮಲ, ಹಣಕ್ಕಾಗಿ ಮುಖ್ಯಮಂತ್ರಿ ಪದವಿ ಸೇಲ್ ವಿಚಾರ, ಭ್ರಷ್ಟಾಚಾರ, ಭಾವುಕ ವಿಷಯಗಳಿಂದ ಸಮಾಜದಲ್ಲಿ ಒಡಕು ಉಂಟು ಮಾಡುವ ವಿಷಯಗಳನ್ನು ಇಟ್ಟುಕೊಂಡು ಗುಡುಗಿದ್ದಾರೆ.

"ಕುಟುಂಬ ಆಧಾರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು." ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಉಪದೇಶವಿದು. ವಾಸ್ತವ ಗುರುತಿಸಿ, ಬಿಜೆಪಿ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ..

ಕುಟುಂಬ ಪಕ್ಷಗಳ ಟೀಕೆ ನೆಪವಷ್ಟೇ.. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿ ರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂತಹ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದಿದ್ದಾರೆ.

ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಹೋರಾಟದ ಫಲಗಳಲ್ಲಿ ಜನಸಂಘವೂ ಒಂದು. ತುರ್ತು ಪರಿಸ್ಥಿತಿ ಹೇರಿದಾಗ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ನೂರಾರು ಸಣ್ಣಪುಟ್ಟ ಪಕ್ಷಗಳನ್ನು ಒಗ್ಗೂಡಿಸಿದ್ದು ಅವರೇ. ಇವೆಲ್ಲಾ ಒಟ್ಟಾಗಿ ʼಜನತಾ ಪರಿವಾರʼ ಉದಯವಾಯಿತು.

ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್, ಜೆಡಿಯು, ಆರ್ʼಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ. ಜನತಾ ಪರಿವಾರದ ಟಿಸಿಲುಗಳು ದೇಶದ ಉದ್ದಗಲಕ್ಕೂ ಬೃಹತ್ ವೃಕ್ಷಗಳಾಗಿ ಬೆಳೆದು ನಿಂತಿವೆ. ಅವುಗಳ ಬೇರುಗಳು ಆಳಕ್ಕಿಳಿದು ಬಲಿಷ್ಠವಾಗಿವೆ. ಕೀಳುವುದು, ಅಲ್ಲಾಡಿಸುವುದು ಸುಲಭವಲ್ಲ. ಮೋದಿ ಅವರಿಗೆ ಈ ವಿಷಯವೂ ತಿಳಿಯದ್ದೇನಲ್ಲ ಎಂದು ಹೇಳಿದ್ದಾರೆ.

  • ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ.

    ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ. 17/17

ಜನಸಂಘ ಬಿಜೆಪಿಯಾಗಿ ರೂಪಾಂತರಗೊಂಡು ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದು ತನ್ನ ಸ್ವಂತ ಶಕ್ತಿಯಿಂದೇನಲ್ಲ. ಇದೇ ಕುಟುಂಬ ಕೇಂದ್ರಿತ ಪಕ್ಷಗಳ ಊರುಗೋಲಿನಿಂದ. ಎನ್​ಡಿಎ ಹುಟ್ಟಿದ್ದು ಹೇಗೆ?, ಹುಟ್ಟಿದಾಗ ಎಷ್ಟು ಪಕ್ಷಗಳಿದ್ದವು?, ಈಗೆಷ್ಟಿವೆ? ಈ ಮಾಹಿತಿ ಮೋದಿ ಅವರ ಮನದಲ್ಲಿ ಇರಬೇಕಿತ್ತು.
ಲೊಕಸಭೆಯಲ್ಲಿ ಈಗ ಬಿಜೆಪಿಗೆ 303 ಸೀಟ್​​ಗಳಿವೆ. ಆದರೆ, ಎಷ್ಟು ಸೀಟ್​​ಗಳಿಂದ ಈ ಅಂಕಿ ಆರಂಭವಾಯಿತು? ಆ ಪಕ್ಷದ ಪ್ರಯಾಣ ಶುರುವಾಗಿದ್ದು ಎಲ್ಲಿಂದ?, ಮೊದಲಿನದ್ದೆಲ್ಲವನ್ನೂ ಮೋದಿ ಮರೆತರೆ ಹೇಗೆ?, ಈಗಲೂ ಅವರು ಟೀಕಿಸಿದ ಕುಟುಂಬ ಕೇಂದ್ರಿತ ಪಕ್ಷಗಳು ಎನ್​ಡಿಎ ಕೂಟದಲ್ಲಿವೆಯಲ್ಲ.

ಇತ್ತೀಚೆಗೆ, ನಿತ್ಯವೂ ಕುಟುಂಬ ರಾಜಕಾರಣ-ಭ್ರಷ್ಟಾಚಾರದ ಬಗ್ಗೆ ಹೇಳುವ ಅವರ ಪಕ್ಷದಲ್ಲೇ ಇರುವ ವಂಶವೃಕ್ಷದ ಘೋಂಡಾರಣ್ಯ & ಭ್ರಷ್ಟಾಚಾರ ಕೂಪದ ಬಗ್ಗೆ ಅವರೇಕೆ ದಿವ್ಯಮೌನ ವಹಿಸುತ್ತಾರೆ. ಕರ್ನಾಟಕದಿಂದ ಹಿಡಿದು, ವಿಂಧ್ಯ ಪರ್ವತದ ಆಚೆಗೂ ಬಿಜೆಪಿಗರ ಕುಟುಂಬಗಳ ಕುಲಕಸುಬು ರಾಜಕೀಯವೇ ಆಗಿ, ಭ್ರಷ್ಟಾಚಾರವು ಅವರ ನಿತ್ಯ ಆಚಾರ ಆಗಿದೆ ಎಂದು ಹೆಚ್​ಡಿಕೆ ದೂರಿದ್ದಾರೆ.

ದೇಶಕ್ಕೆ ಅಪಾಯ ಇರುವುದು 'ಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ'. ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮಾನ್ಯ ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ.

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರ್ಕಾರ ಬಂದಿದ್ದು ಹೇಗೆ?, ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ 'ಅಕ್ರಮ ಸರ್ಕಾರ'ವಿದು. ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ?, ಮೋದಿ ಅವರು ಈ ನೀತಿಹೀನ ಸರ್ಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ?, ಯುವಜನರಿಗೆ ದಾರಿದೀಪವಾ?, ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ! ಏಕೆ? ಎಂದು ಹೆಚ್​​ಡಿಕೆ ಕುಟುಕಿದ್ದಾರೆ.

'ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ?, ಒಂದೆಡೆ: ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ; ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ!! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? "ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ" ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ. ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸ್​​ ಸಹ ಕೊಡಲಿಲ್ಲ.

ಹೋಗಲಿ.. ಮೋದಿ ಅವರೂ ಸಿಎಂ ಕುರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ. ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್​​ಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ?, ಯುವಕರಿಗೆ ಆದರ್ಶವಾ?. ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: 'ಪರಿವಾರವಾದಿ' ಪಕ್ಷಗಳು ಪ್ರಜಾಪ್ರಭುತ್ವ-ಯುವ ಜನತೆಯ ದೊಡ್ಡ ಶತ್ರು: ಮೋದಿ ವಾಗ್ದಾಳಿ

Last Updated : May 27, 2022, 8:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.