ETV Bharat / city

ಮತಾಂತರ ನಿಷೇಧ ಕಾಯ್ದೆಗೆ ನಮ್ಮ ಬೆಂಬಲ ಇಲ್ಲ; ಶೇ.40ರ ಬಗ್ಗೆ ಮಾತನಾಡಲು 'ಕೈ' ನಾಯಕರಿಗೆ ನೈತಿಕತೆಯಿಲ್ಲ:ಹೆಚ್​​ಡಿಕೆ - ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ

ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದು ಹೆಚ್​​ಡಿಕೆ ತಿಳಿಸಿದರು.

HD Kumaraswamy reaction on anti conversion bill

author img

By

Published : Dec 16, 2021, 12:50 AM IST

ಬೆಂಗಳೂರು/ನವದೆಹಲಿ: ರಾಜ್ಯದ ಬಿಜೆಪಿ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಪಕ್ಷ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಇದು ಅಗತ್ಯವಿಲ್ಲದ ವಿಷಯ ಎಂದು ಜೆಡಿಎಸ್​​​​ ಪಕ್ಷದ ಶಾಸಕಾಂಗ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದರು. ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ವಿರೋಧ ಮಾಡುತ್ತಾರೆಂದು ಅವರು ತಿಳಿಸಿದರು.

ಮತಾಂತರ ನಿಷೇಧ ಕಾಯ್ದೆಗೆ ನಮ್ಮ ಬೆಂಬಲ ಇಲ್ಲ ಎಂದ ಹೆಚ್​ಡಿಕೆ

ಶೇ. 40 ಎಲ್ಲರೂ ಗಾಜಿನ ಮನೆಯಲ್ಲಿ ಇದ್ದಾರೆ: ಬಿಟ್ ಕಾಯಿನ್ ಹಗರಣ ಹಾಗೂ ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ ಮಾಡುವ ಬಗ್ಗೆ ಜೆಡಿಎಸ್ ಮಾತನಾಡುತ್ತಿಲ್ಲ ಎನ್ನುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ಗುತ್ತಿಗೆದಾರ ಸಂಘದ ಒಬ್ಬರು ಪ್ರಧಾನಮಂತ್ರಿಗಳಿಗೆ ಬರೆದಿರುವ ಪತ್ರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಶೇ. 40 ಕಮಿಷನ್ ಅಂತ ಮಾತನಾಡುತ್ತಿದ್ದಾರೆ. ಈ ಪರ್ಸಂಟೇಜ್ ವ್ಯವಹಾರ ಬರಲು ಯಾರು ಕಾರಣ? ಶೇ. 10, 20, 30, 40 ಕಮಿಷನ್ ಅಂತ ಹೇಳುವವರಿಗೆ ಆ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?ಎಲ್ಲರೂ ಗಾಜಿನ ಮನೆಯಲ್ಲಿ ಇರುವವರೇ. ಗಾಜಿನ ಮನೆಯಲ್ಲಿ ಕೂತು ಕಲ್ಲು ಯಾಕೆ ಹೊಡೆಯುತ್ತಾರೆ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಯಾರು ಇವತ್ತು ಕಮಿಷನ್ ಬಗ್ಗೆ ಮಾತನಾಡುತ್ತಿದ್ದಾರೆ, ಅದೇ ಕಾಂಗ್ರೆಸ್ ಪಕ್ಷದ ನಾಯಕರು ಐದು ವರ್ಷ ಆಡಳಿತ ನಡೆಸಿದರಲ್ಲ, ಅವರ ಕಾಲದಲ್ಲಿ ಏನೇನಾಯ್ತು ಎಂದು ಹೇಳಬೇಕಲ್ಲ. ಅವರ ಕಾಲದಲ್ಲಿ ಎಷ್ಟು ಪರ್ಸಂಟೇಜ್ ಇತ್ತು ಎನ್ನುವುದು ಅವರಿಗೂ ಗೊತ್ತು. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಖಂಡಿತಾ ಇಲ್ಲ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಇದನ್ನೂ ಓದಿರಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ಮಸೂದೆ ಮಂಡನೆ ಮಾಡೇ ಮಾಡ್ತೇವೆ: ಆರಗ ಜ್ಞಾನೇಂದ್ರ

ನಿಮ್ಮ ಸರಕಾರ ಇದ್ದಾಗ ಈ ಪರ್ಸಂಟೇಜ್ ವ್ಯವಹಾರದ ವಿರುದ್ಧ ಯಾಕೆ ಕ್ರಮ ಜರುಗಿಸಲು ಆಗಲಿಲ್ಲ ಎಂದು ಕೆಲವರು ಕೇಳುತ್ತಿದ್ದಾರೆ. ಸ್ವತಂತ್ರ ಸರಕಾರ ನನಗೆಂದೂ ಬರಲಿಲ್ಲ. ಆದರೆ, ಯಾವುದೇ ಕಾರಣಕ್ಕೂ ಪರ್ಸಂಟೇಜ್ ವ್ಯವಸ್ಥೆಯನ್ನು ನನ್ನ ಕಚೇರಿಯಲ್ಲಿ ಇಟ್ಟಿರಲಿಲ್ಲ. ನನ್ನ ಕಾಲದಲ್ಲೂ ಎಲ್ಲೆಲ್ಲಿ ಪರ್ಸಂಟೇಜ್ ಹೋಗ್ತಾ ಇತ್ತು ಎನ್ನುವ ಮಾಹಿತಿ ನನಗೆ ಇತ್ತು. ಮುಂದೆ ನಮ್ಮ ಪಕ್ಷಕ್ಕೆ ಜನರು ಸ್ವತಂತ್ರ ಸರಕಾರ ಕೊಟ್ಟರೆ ಆಗ ಈ ಬಗ್ಗೆ ಚರ್ಚೆ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಲಿ: ಪರ್ಸಂಟೇಜ್ ಬಗ್ಗೆ ಮಾತನಾಡುವ ನೈತಿಕತೆ ರಾಜ್ಯದ ಎರಡೂ ಪಕ್ಷಗಳಿಗೆ ಇಲ್ಲ ಎಂದು ಅವರು ಹೇಳಿದರಲ್ಲದೆ, ಪ್ರತಿ ಯೋಜನೆಗೆ ಹಣಕಾಸು ಇಲಾಖೆ ಹೊಂದಿದ್ದ ನನ್ನ ಕಚೇರಿಯಿಂದ ಎಂದೂ ಪರ್ಸಂಟೇಜ್ ವ್ಯವಸ್ಥೆ ಇರಲಿಲ್ಲ. ಅಂತದ್ದಕ್ಕೆ ಪ್ರೋತ್ಸಾಹ ಕೊಟ್ಟಿಲ್ಲ. ಆಗ ನಡೆದಿರುವ ಪರ್ಸಂಟೇಜ್ ವ್ಯವಹಾರದಲ್ಲಿ ನನ್ನ ಪಾತ್ರ ಇಲ್ಲ. ಆದರೆ ಇವತ್ತು ಪರ್ಸಂಟೇಜ್ ಬಗ್ಗೆ ಯಾರು ಯಾರು ಮಾತನಾಡುತ್ತಿದ್ದಾರೆ ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಂಡರೆ ಉತ್ತರ ಸಿಗುತ್ತದೆ ಎಂದರು. ಎಲ್ಲರೂ ಗಾಜಿನ ಮನೆಯಲ್ಲಿ ಇದ್ದೇ ಮಾತನಾಡುತ್ತಿದ್ದಾರೆ. ಇವರಿಗೆ ಹಾಗೆ ಮಾತನಾಡಲು ಯಾವ ನೈತಿಕತೆ ಇದೆ. ದೇವರಾಜ ಅರಸು ಅವರ ನಂತರ ಐದು ವರ್ಷ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರ ಸರಕಾರದಲ್ಲಿ ಪರ್ಸಂಟೇಜ್ ವ್ಯವಹಾರ ಇರಲಿಲ್ಲವಾ? ಅವರು ಆತ್ಮ ಮುಟ್ಟಿಕೊಂಡು ಹೇಳ್ತಾರಾ? ಇಂತದ್ದನ್ನು ತಡೆಯಲು ಎಲ್ಲ ಪಕ್ಷಗಳು ಮಾತ್ರ ಅಲ್ಲ, ಜನಪ್ರತಿನಿಧಿಗಳ ಪಾತ್ರ ತುಂಬಾ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಮೆಟ್ರೋ ಉದಾಹರಣೆ ಕೊಟ್ಟ ಹೆಚ್​ಡಿಕೆ: ನಾನು ಮುಖ್ಯಮಂತ್ರಿ ಆಗಿದ್ದಾಗ ಯಾವುದೇ ಕಡತ ವಿಲೇವಾರಿ ಮಾಡಬೇಕಾದ ಸಂದರ್ಭದಲ್ಲಿ ನಾನು ಪರ್ಸಂಟೇಜ್ ಇಟ್ಟಿರಲಿಲ್ಲ. ಉದಾಹರಣೆಗೆ, ನಮ್ಮ ಮೆಟ್ರೋ ಯೋಜನೆಗೆ, ರಾಜ್ಯದಲ್ಲಿ ಮೊದಲ ಬಾರಿಗೆ 19 ಕಿ.ಮೀ. ದೂರದ ಪ್ರಥಮ ಹಂತಕ್ಕೆ ಚಾಲನೆ ನೀಡಿದ್ದು 2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ. ಆಗ ಟೆಂಡರ್​ಗೆ ಒಪ್ಪಿಗೆ ಕೊಟ್ಟೆ. ಒಂದು ಕ್ಷಣವೂ ತಡ ಮಾಡದೇ ಫೈಲ್ ಕ್ಲಿಯರ್ ಮಾಡಿದೆ. ಆ ಗುತ್ತಿಗೆದಾರ ಯಾರೂ ಅನ್ನೋದು ನನಗೆ ಗೊತ್ತಿರಲಿಲ್ಲ. ನಾನು ಇಟ್ಟ ಷರತ್ತು ಏನೆಂದರೆ, ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಬೇಕು ಎಂತಾ ಹೇಳಿದ್ದು ಮಾತ್ರ. 2018ರಲ್ಲಿ ಕೂಡ ನಾನು ಸಿಎಂ ಆಗಿದ್ದಾಗ ಗುತ್ತಿಗೆದಾರರನ್ನು ಕರೆದು ನಿಮ್ಮ ಕಡತಕ್ಕೆ ಸಹಿ ಹಾಕುತ್ತಿದ್ದೇನೆ. ಇಷ್ಟು ಹಣ ಕೊಡಬೇಕು ಎಂದು ಕೇಳಿದವನಲ್ಲ. ಹೀಗಾಗಿ ಎಲ್ಲರೂ ಗಾಜಿನ ಮನೆಯಲ್ಲಿ ಇದ್ದಿರಪ್ಪ, ಇದರ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿ ಉಳಿಸಿಕೊಂಡಿದ್ದಿರಿ ಎನ್ನುವುದೇ ನನ್ನ ಪ್ರಶ್ನೆ ಎಂದು ಹೇಳಿದರು. ಅದಕ್ಕೆ ಜನತೆಗೆ ನಾನು ಕೇಳುತ್ತಿದ್ದೇನೆ, ಒಮ್ಮೆ ನನಗೆ ಸ್ವತಂತ್ರ ಸರಕಾರ ನೀಡಲಿ, ಅದರಲ್ಲಿ ನಾನು ವಿಫಲ ಆದರೆ ಅವತ್ತು ನಂಗೇನೂ ಶಿಕ್ಷೆ ಕೊಡಬೇಕೋ ಕೊಡಿ. ಅದು ಬಿಟ್ಟು ಪರ್ಸಂಟೇಜ್ ಹೊಡೆಯುವ ಇಂತಹ ಕೆಲಸ ಮಾಡುವವರಿಗೆ ಮತ್ತೆ ಮತ್ತೆ ಅವಕಾಶ ಕೊಟ್ಟರೆ ನಾವು ಹೋರಾಟ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು. ಸಾವಿಲ್ಲದ ಮನೆಯಲ್ಲಿ ಸಾಸಿವೆ ತನ್ನಿ ಎಂದು ಗೌತಮ ಬುದ್ಧ ಹೇಳಿದ ಮಾತನ್ನು ಉಲ್ಲೇಖಿಸಿದ ಅವರು, ಅದೇ ಪರಿಸ್ಥಿತಿ ಈಗ ಎಲ್ಲ ಕಡೆ ಇದೆ. ಇಂತಹ ಪರಿಸ್ಥಿಯಲ್ಲಿ ಯಾರ ಬಗ್ಗೆ ಚರ್ಚೆ ಮಾಡ್ತಾರೆ ಕಾಂಗ್ರೆಸ್ ನಾಯಕರು? ಎಂದು ಪ್ರಶ್ನಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.