ETV Bharat / city

ಒಡಕು ರಾಜಕಾರಣ ಬಿಜೆಪಿಯ ನಿತ್ಯ ಕಾಯಕ, ಆಪರೇಷನ್ ಕಮಲ ಅಧಿಕೃತ ರಾಜಧರ್ಮ: ಹೆಚ್ಡಿಕೆ

ನಮ್ಮ ಪಕ್ಷದ್ದು ಕುಟುಂಬ ರಾಜಕಾರಣವಾದರೆ ಬಿಜೆಪಿಯವರದ್ದು ಯಾವ ರಾಜಕಾರಣ? ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಪ್ರಶ್ನಿಸಿದ್ದಾರೆ.

HD kumaraswamy
ಹೆಚ್.ಡಿ ಕುಮಾರಸ್ವಾಮಿ
author img

By

Published : Nov 14, 2021, 1:31 PM IST

ಬೆಂಗಳೂರು: ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ, ಬೀದಿಯಲ್ಲಿ ಇನ್ನೊಂದು ಮುಖ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಕಿಡಿ ಕಾರಿದ್ದಾರೆ. ಇದೇ ವೇಳೆ, ಒಡಕು ರಾಜಕಾರಣ ಬಿಜೆಪಿಯ ನಿತ್ಯ ಕಾಯಕವಾದರೆ, ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ ಎಂದು ಕಟುವಾಗಿ ಟೀಕಿಸಿದ್ದಾರೆ.

ಜೆಡಿಎಸ್​​​ನಲ್ಲಿನ ಕುಟುಂಬ ರಾಜಕಾರಣದ ಬಗ್ಗೆ ರಾಜ್ಯ ಬಿಜೆಪಿ ಮಾಡಿರುವ ಟ್ವೀಟ್​​​ಗೆ ಪ್ರತಿಟ್ವೀಟ್ ಮಾಡಿರುವ ಅವರು, ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು 'ಆಪರೇಷನ್ ಕಮಲ'ದ ಮೂಲಕ ರಚನೆ ಮಾಡಿದ ಸರ್ಕಾರಗಳೇ ಸಾಕ್ಷಿ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಬೊಟ್ಟು ಮಾಡಿದ್ದಾರೆ.

ಯಡಿಯೂರಪ್ಪ ಕುಟುಂಬ:

  • ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ
  • ಹಿರಿಮಗ ಲೋಕಸಭೆ ಸದಸ್ಯ
  • ಕಿರಿಮಗ ಪಕ್ಷದ ಉಪಾಧ್ಯಕ್ಷ

ಬಳ್ಳಾರಿ ರೆಡ್ಡಿ ಕುಟುಂಬ:

  • ಕರುಣಾಕರ ರೆಡ್ಡಿ ಶಾಸಕ
  • ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ
  • ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ
  • ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ
  • ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ
  • ಸಣ್ಣ ಫಕೀರಪ್ಪ ಕೂಡ ಅವರ ಪೈಕಿ

ಜಾರಕಿಹೊಳಿ ಕುಟುಂಬ:

  • ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು
  • ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು

ಲಿಂಬಾವಳಿ ಕುಟುಂಬ:

  • ಅರವಿಂದ ಲಿಂಬಾವಳಿ ಶಾಸಕರು
  • ಅವರ ಭಾಮೈದ ರಘು ಕೂಡ ಶಾಸಕರಲ್ಲವೇ?

ಉದಾಸಿ ಕುಟುಂಬ:

  • ದಿ.ಉದಾಸಿ ಅವರು ಮಂತ್ರಿಗಳಾಗಿದ್ದರು
  • ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುವುದು ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗುರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ‌ ಎಂದು ಹೆಚ್​ಡಿಕೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಶಾಮೀಲಾದ್ರೂ ಬಿಡಲ್ಲ, ಬಲಿ ಹಾಕ್ತೀವಿ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.