ಬೆಂಗಳೂರು: ಮಾರಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಮ್ಮ ಜೀವ ಅಪಾಯದಲ್ಲಿದ್ದರೂ ಸಹ ಅದನ್ನು ಲೆಕ್ಕಿಸದೇ ಜನರಿಗೆ ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ 25 ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.