ETV Bharat / city

ಕೇಂದ್ರ ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕು: ಹೆಚ್​​ಡಿಕೆ ಟ್ವೀಟ್ - ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

hd kumaraswamy tweet about Kannada Status
ಕೇಂದ್ರ ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕು: ಹೆಚ್​​ಡಿಕೆ ಟ್ವೀಟ್
author img

By

Published : Sep 17, 2020, 4:03 PM IST

ಬೆಂಗಳೂರು: ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದೇ ಎಂಬ ಪ್ರಶ್ನೆಗೆ ಕೇಂದ್ರ ಇಲ್ಲವೆಂದಿದೆ. ಇದು ಭಾಷಾ ತಿರಸ್ಕಾರದ ಸಂಕೇತ. ಆದರೆ ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ. ಕೇಂದ್ರ ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸುವ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಒತ್ತಾಯಿಸಿದ್ದಾರೆ.

  • ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು.
    4/4

    — H D Kumaraswamy (@hd_kumaraswamy) September 17, 2020 " class="align-text-top noRightClick twitterSection" data=" ">

ಇತರ ಭಾಷೆಗಳಿಗೆ ಹಿಂದಿಯಷ್ಟು ಸ್ಥಾನಮಾನ ನೀಡಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಬಿಜೆಪಿ. ಹಿಂದಿಯೇತರ ರಾಜ್ಯಗಳ, ಹಿಂದಿಯೇತರ ಭಾಷಿಕರ ಸಂಸದರನ್ನೂ ಒಳಗೊಂಡು ಸರ್ಕಾರ ರಚಿಸಿದೆ ಎಂಬುದು ನೆನಪಿರಲಿ. ಎಲ್ಲ ಅಧಿಕೃತ ಭಾಷೆಗಳನ್ನು ಆಡಳಿತದಲ್ಲಿ ಜಾರಿಗೆ ತಂದು ಅವರೆಲ್ಲರ ಋಣ ತೀರಿಸುವುದು ಬಿಜೆಪಿಯ ಕರ್ತವ್ಯ ಎಂದಿದ್ದಾರೆ.

ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

  • ಪ್ರಧಾನಿ @narendramodi ಅವರಿಗೆ ಜನ್ಮದಿನದ ಶುಭಾಷಯಗಳು. ಭಗವಂತ ನಿಮಗೆ ಅಯುರಾರೋಗ್ಯ ದಯಪಾಲಿಸಲೆಂದು ನಾನು ಈ ಸಂದರ್ಭದಲ್ಲಿ ಕೋರುತ್ತೇನೆ.

    I wish Hon'ble Prime Minister @narendramodi a very happy birthday. May God bless you with good health and longevity.
    1/2

ಶುಭ ಕೋರಿದ ಹೆಚ್​ಡಿಕೆ :

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಷಯಗಳು. ಭಗವಂತ ನಿಮಗೆ ಆಯುರಾರೋಗ್ಯ ದಯಪಾಲಿಸಲೆಂದು ಕೋರಿದ್ದಾರೆ. ಕೋವಿಡ್, ಚೀನಾ ತಂಟೆ, ಆರ್ಥಿಕತೆ ಕುಸಿತ, ನಿರುದ್ಯೋಗದಂತಹ ಸಮಸ್ಯೆ ಮೆಟ್ಟಿನಿಲ್ಲುವ ಸಾಮರ್ಥ್ಯವನ್ನು ಭಗವಂತ ಕರುಣಿಸಲಿ ಎಂಬ ಜನಾಶಯದ ಹಾರೈಕೆಯೂ ನನ್ನದು ಕೂಡ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.