ETV Bharat / city

ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕಿದೆ: ಹೆಚ್​ಡಿಕೆ - HD Kumaraswamy on schools

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದುಕೊರತೆಗಳನ್ನು ನೀಗಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್​​​​​ ಮಾಡಿದ್ದಾರೆ.

HD Kumaraswamy
ಮಾಜಿ ಸಿಎಂ ಕುಮಾರಸ್ವಾಮಿ
author img

By

Published : May 17, 2022, 2:43 PM IST

ಬೆಂಗಳೂರು: ಶಾಲೆಗೆ ಬಂದ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸಿದ ಸಮಸ್ತ ಶಿಕ್ಷಕ ಬಂಧುಗಳಿಗೆ ಅಭಿನಂದನೆಗಳು. ಮಕ್ಕಳ ಜೊತೆ ಮಕ್ಕಳಾಗಿ ಶಿಕ್ಷಕರು ವಹಿಸುವ ಜವಾವ್ದಾರಿ ಮಹತ್ವದ್ದು. ಕೋವಿಡ್​​ನಿಂದ ಬಳಲಿದ ಕಲಿಕಾ ವ್ಯವಸ್ಥೆಗೆ ನವಚೈತನ್ಯ ತುಂಬಿದವರೂ ಶಿಕ್ಷಕರೇ. ಅವರ ಸಮಸ್ಯೆ - ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಉದಾಸೀನ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

  • ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ ವ್ಯವಸ್ಥೆ ಕಲ್ಪಿಸಬೇಕು. ಇದು ರಾಜ್ಯ ಸರಕಾರದ ಹೊಣೆ. 3/3

    — H D Kumaraswamy (@hd_kumaraswamy) May 17, 2022 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ - ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿದಿನ ಬೆಳಗ್ಗೆ 5ಕ್ಕೆ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ಒಮ್ಮತದ ತೀರ್ಮಾನ

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದು ಕೊರತೆಗಳನ್ನು ನೀಗಿಸಬೇಕು. ಸ್ವಚ್ಛತೆ - ನೈರ್ಮಲ್ಯ, ಮೂಲಸೌಕರ್ಯಗಳನ್ನು ಉತ್ತಮಪಡಿಸಲು ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ ವ್ಯವಸ್ಥೆ ಕಲ್ಪಿಸಬೇಕು. ಇದು ರಾಜ್ಯ ಸರ್ಕಾರದ ಹೊಣೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.