ETV Bharat / city

ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು-''ಸಂಕಲ್ಪ''ರಂತೆ ಜೀವ ಕಳೆದುಕೊಳ್ಳಬಾರದು: ಹೆಚ್​ಡಿಕೆ - ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ವಿದ್ಯಾರ್ಥಿನಿ ಸಂಕಲ್ಪ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ ಎಂದು ಹೆಚ್.ಡಿ .ಕುಮಾರಸ್ವಾಮಿ ಹೇಳಿದ್ದಾರೆ.

HD Kumaraswamy tweet on student death
ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಹೆಚ್​ಡಿ ಕುಮಾರಸ್ವಾಮಿ ಟ್ವೀಟ್
author img

By

Published : Nov 27, 2021, 3:52 PM IST

ಬೆಂಗಳೂರು: ವೈದ್ಯೆ ಆಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ ಶೇ.96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರ್ಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ . ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್​ಡಿಕೆ, ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನೇ ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ ಎಂದಿದ್ದಾರೆ.

ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು. ಜೊತೆಗೆ ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ. ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ಕಳೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ಪ್ರಕರಣದಲ್ಲಿ ಯುವತಿ ದೂರು ನೀಡಿಲ್ಲ: ಪೊಲೀಸ್‌ ಆಯುಕ್ತ ರವಿಕುಮಾರ್‌

ನಮ್ಮ ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರ್ಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರ್ಕಾರವು ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ಹೆಚ್​ಡಿಕೆ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.