ETV Bharat / city

ಚುನಾವಣೆಗಳು ಬಂದಾಗ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜ್ವರ ಶುರುವಾಗುತ್ತದೆ : ಹೆಚ್​ಡಿಕೆ - ವಿಧಾನ ಪರಿಷತ್ ಚುನಾವಣೆ

ಕಾಂಗ್ರೆಸ್ ನಾಯಕರಿಗೆ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಹಾಗಾಗಿ, ಅವರು ಜನರನ್ನು, ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಚುನಾವಣೆಗಳು ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತದೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ..

HD Kumaraswamy tweet against congress
ಕಾಂಗ್ರೆಸ್ ವಿರುದ್ಧ ಹೆಚ್​ಡಿಕೆ ಟ್ವೀಟ್
author img

By

Published : Nov 27, 2021, 4:30 PM IST

ಬೆಂಗಳೂರು : ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿರುವುದು ಸರಿಯಷ್ಟೇ.. ಈ ಬಗ್ಗೆ ನಾನು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿ ನಮ್ಮ ಪಕ್ಷದ ಅಭಿಪ್ರಾಯ ಹೇಳಿದ್ದೇನೆ. ಆದರೆ, ಆ ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

HD Kumaraswamy tweet against congress : ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಎಲ್ಲೂ ನಾನು ಹೇಳಿಲ್ಲ. ಆದರೆ, ಬೆಂಬಲ ಕೇಳಿದ ಯಡಿಯೂರಪ್ಪ ಅವರ ಬಗ್ಗೆ ರಾಜಕೀಯವನ್ನು ಹೊರತುಪಡಿಸಿ, ಒಂದೆರಡು ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಅವರ ರಾಜಕೀಯ ಅನುಭವ, ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

  • ಕಾಂಗ್ರೆಸ್ ಪಕ್ಷದ ನಾಯಕರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಆ ಕಾರಣಕ್ಕೆ ಅವರು ಜನರನ್ನು, ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಪ್ರತೀ ಚುನಾವಣೆ ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತದೆ. 4/5

    — H D Kumaraswamy (@hd_kumaraswamy) November 27, 2021 " class="align-text-top noRightClick twitterSection" data=" ">

ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದಾಕ್ಷಣ ಜೆಡಿಎಸ್ ಪಕ್ಷ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ. ಚಿಕ್ಕಬಳ್ಳಾಪುರದಲ್ಲಿ ನಾನು ಕೊಟ್ಟ ಹೇಳಿಕೆಯನ್ನು ಮತ್ತೊಮ್ಮೆ ಗಮನಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.

  • ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಎಲ್ಲೂ ನಾನು ಹೇಳಿಲ್ಲ. ಆದರೆ ಬೆಂಬಲ ಕೇಳಿದ ಯಡಿಯೂರಪ್ಪ ಅವರ ಬಗ್ಗೆ ರಾಜಕೀಯವನ್ನು ಹೊರತುಪಡಿಸಿ ಒಂದೆರಡು ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಅವರ ರಾಜಕೀಯ ಅನುಭವ, ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ. ಇದರಲ್ಲಿ ತಪ್ಪೇನಿದೆ? 2/5

ಕಾಂಗ್ರೆಸ್ ಪಕ್ಷದ ನಾಯಕರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಆ ಕಾರಣಕ್ಕೆ ಅವರು ಜನರನ್ನು, ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಚುನಾವಣೆಗಳು ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು-''ಸಂಕಲ್ಪ''ರಂತೆ ಜೀವ ಕಳೆದುಕೊಳ್ಳಬಾರದು: ಹೆಚ್​ಡಿಕೆ

ಕಾಂಗ್ರೆಸ್​ನ ಮಂಡ್ಯ, ಕೊಡಗು ಅಭ್ಯರ್ಥಿಗಳ ಬಗ್ಗೆ ಜನರಿಗೆ ಗೊತ್ತಾಗಿದೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ಯಾರು ಕೊಡಿಸಿದರು ಎನ್ನುವುದನ್ನು ಸ್ವತಃ ಸಹಕಾರ ಸಚಿವರೇ ಹೇಳಿದ್ದಾರೆ. ಹಾಗಾದರೆ, ಕಾಂಗ್ರೆಸ್ ಪಕ್ಷವು ಬಿಜೆಪಿಯ ಯಾವ ಟೀಮ್‌? ಸಿ ಟೀಮಾ? ಡಿ ಟೀಮಾ?. ನಮ್ಮನ್ನು ಬಿಜೆಪಿಯ ಬಿ ಟೀಮ್ ಎನ್ನುವವರೇ ಉತ್ತರಿಸಬೇಕು ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.