ಬೆಂಗಳೂರು: ರಾಮ ನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮ ಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕರೆ ನೀಡಿದ್ದಾರೆ. ಶ್ರೀರಾಮಚಂದ್ರ ಮಹಾಪ್ರಭು, ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ, ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮ ರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೇ. ರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರ ಇಲ್ಲ, ಅದಕ್ಕೆ ನನ್ನದೂ ಬೆಂಬಲ ಇದೆ ಎಂದಿದ್ದಾರೆ.
-
ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. 1/5 pic.twitter.com/6k6uEt0Kk0
— H D Kumaraswamy (@hd_kumaraswamy) April 10, 2022 " class="align-text-top noRightClick twitterSection" data="
">ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. 1/5 pic.twitter.com/6k6uEt0Kk0
— H D Kumaraswamy (@hd_kumaraswamy) April 10, 2022ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. 1/5 pic.twitter.com/6k6uEt0Kk0
— H D Kumaraswamy (@hd_kumaraswamy) April 10, 2022
ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ ಎಂದು ಕೋರಿದ್ದಾರೆ.
ಶೋಭಾಯಾತ್ರೆಯನ್ನು ಹಿಂದೂಗಳು ವಾಸ ಮಾಡು ಬಡಾವಣೆ, ಬೀದಿಗಳಲ್ಲಿ ಮಾಡಿ. ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ. ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು-ಎಲ್ಲೆಡೆ ಶ್ರೀರಾಮ ನವಮಿ ಸಡಗರ: ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ