ETV Bharat / city

ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ: ಹೆಚ್​​ಡಿಕೆ - ಕಾಲುಬಾಯಿ ಜ್ವರ

ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಲಿ. ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರ ಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ ಎಂದು ಹೆಚ್​​ಡಿಕೆ ಆಗ್ರಹಿಸಿದ್ದಾರೆ.

HD Kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
author img

By

Published : Jun 5, 2021, 11:44 AM IST

ಬೆಂಗಳೂರು: ‘ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೆಯೇ ಹೊರತು ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

  • ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೇ ರೈತ ಕೊರಗಿ ಕುಗ್ಗಿಹೋಗುತ್ತಾನೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ.
    2/5

    — H D Kumaraswamy (@hd_kumaraswamy) June 5, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–ಎಫ್​​​​​​​​​ಎಂಡಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ.

ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೆ ರೈತ ಕೊರಗಿ ಕುಗ್ಗಿ ಹೋಗುತ್ತಾನೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ ಎಂದು ಹೇಳಿದ್ದಾರೆ.

  • ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾ. ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಮುಂದೆ ಜೂನ್‌ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು.
    4/5

ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೋವಿಡ್‌-19 ಕಾರಣದಿಂದ ಲಸಿಕೆ ಹಾಕಿಲ್ಲ ಎಂದು ಪಶುವೈದ್ಯರು ಹೇಳಿದ್ದಾರೆ. ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂತಹ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋ ವಧೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಮುಂದೆ ಜೂನ್‌ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

  • ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಲಿ. ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ.
    5/5

ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಲಿ. ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರ ಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಿಸಿ ರೋಹಿಣಿ ಸಿಂಧೂರಿ‌ ಆರೋಪಕ್ಕೆ 127 ಪುಟಗಳ ದಾಖಲೆ ಸಮೇತ ಉತ್ತರ ನೀಡಿದ ಮೈಸೂರು ಪಾಲಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.