ETV Bharat / city

ಓದುವ ಮಕ್ಕಳಿಗೆ ಆದ್ಯತೆ ಮೇರೆಗೆ ಲಸಿಕೆ ಕೊಡಿ: ಹೆಚ್​ಡಿಕೆ ಆಗ್ರಹ - ಹೆಚ್​ಡಿಕೆ ಟ್ವೀಟ್

ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ, ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಹೆಚ್​ಡಿಕೆ ಒತ್ತಾಯಿಸಿದ್ದಾರೆ.

HDK
HDK
author img

By

Published : May 29, 2021, 8:07 PM IST

ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರ ದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರ ದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

  • ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು.
    3/4

    — H D Kumaraswamy (@hd_kumaraswamy) May 29, 2021 " class="align-text-top noRightClick twitterSection" data=" ">

ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು ಎಂದು ಹೇಳಿದ್ದಾರೆ.

ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡ್​​​​ಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ - ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಹೆಚ್​ಡಿಕೆ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.