ETV Bharat / city

ಠಾಕ್ರೆ ಅವರೇ ಬೆಳಗಾವಿ ಮರಾಠಿಗರದ್ದಲ್ಲ, ವೀರ ಕನ್ನಡಿಗರದ್ದು: ಹೆಚ್​​ಡಿಕೆ ಗುಡುಗು - ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಶಿವಸೇನೆಯೊಂದಿಗೆ ಅಧಿಕಾರ ಹಂಚಿಕೊಂಡಿರುವ ಕಾಂಗ್ರೆಸ್‌ ಪಕ್ಷ ಗಡಿ ವಿಚಾರದಲ್ಲಿ ಉದ್ಧವ್​​ ಠಾಕ್ರೆಗೆ ಬುದ್ಧಿ ಹೇಳಬೇಕು. ರಾಜ್ಯ ಕಾಂಗ್ರೆಸ್‌ ನಾಯಕರು ಬಾಯಿ ಉಪಚಾರಕ್ಕೆ ಠಾಕ್ರೆ ಮಾತುಗಳನ್ನು ಖಂಡಿಸಿದರೆ ಸಾಲದು. ಬದಲಿಗೆ ಬೆಳಗಾವಿ ನಮ್ಮದೇ ಎಂಬುದನ್ನು ಮನದಟ್ಟು ಮಾಡಬೇಕು ಎಂದು ಹೆಚ್​ಡಿಕೆ ಹೇಳಿದ್ದಾರೆ.

hd-kumarswamy-tweet
ಹೆಚ್​​ಡಿಕೆ ಗುಡುಗು
author img

By

Published : Jan 27, 2021, 9:39 PM IST

ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿ ಬಗ್ಗೆ ನೀಡಿದ ಉದ್ಧಟತನದ ಹೇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಗುಡುಗಿದ್ದಾರೆ.

  • ಮಹಾರಾಷ್ಟ್ರದ ಹಠದಿಂದಲೇ ರಚನೆಯಾದ ಮಹಾಜನ ಸಮಿತಿ ವರದಿಯಲ್ಲಿ ಬೆಳಗಾವಿ ಕರ್ನಾಟಕದ್ದೇ ಎಂದು ಸ್ಪಷ್ಟವಾಗಿ ಹೇಳಿದೆ. ಇದನ್ನು ಒಪ್ಪದ ಮಹಾರಾಷ್ಟ್ರ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿರುವ ಪ್ರಕರಣವೊಂದರ ಬಗ್ಗೆ ಇಲ್ಲ ಸಲ್ಲದ್ದನ್ನು ಮಾತಾಡುತ್ತಿರುವ ಉದ್ಧವ ಠಾಕ್ರೆ, ವಿಚಾರಣೆಯ ದಿಕ್ಕನ್ನೇ ತಪ್ಪಿಸುವ ಹುನ್ನಾರ ಮಾಡುತ್ತಿದ್ದಾರೆ.
    3/6

    — H D Kumaraswamy (@hd_kumaraswamy) January 27, 2021 " class="align-text-top noRightClick twitterSection" data=" ">

ಓದಿ: ನಾವು ಮುಂಬೈ ಕರ್ನಾಟಕದವರು, ಮುಂಬೈ ನಮ್ಮದು: ಮಹಾ ಸಿಎಂಗೆ ಡಿಸಿಎಂ ಸವದಿ ತಿರುಗೇಟು‌

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಯಾವುದೇ ಪಕ್ಷ ಬೆಳಗಾವಿ ವಿಚಾರದಲ್ಲಿ ಸಲ್ಲದ ಕಿತಾಪತಿ ಮಾಡುತ್ತವೆ ಎಂಬುದನ್ನು ಅರಿತೇ ನನ್ನ ಸರ್ಕಾರದ ಅವಧಿಯಲ್ಲಿ ಅಲ್ಲಿ ವಿಧಾನಸೌಧ ನಿರ್ಮಿಸಿ, ಅಧಿವೇಶನವನ್ನೂ ನಡೆಸಲಾಯಿತು. ಬೆಳಗಾವಿಯ ಸುವರ್ಣ ಸೌಧ ಮಹಾರಾಷ್ಟ್ರದ ವಿಸ್ತರಣಾವಾದವನ್ನು ವಿರೋಧಿಸಿ ನಿಂತಿರುವ ಕನ್ನಡಿಗರ ಸ್ವಾಭಿಮಾನಿ ಸೌಧ ಎಂದಿದ್ದಾರೆ.

ಮಹಾರಾಷ್ಟ್ರದ ಹಠದಿಂದಲೇ ರಚನೆಯಾದ ಮಹಾಜನ ಸಮಿತಿ ವರದಿಯಲ್ಲಿ ಬೆಳಗಾವಿ ಕರ್ನಾಟಕದ್ದೇ ಎಂದು ಸ್ಪಷ್ಟವಾಗಿ ಹೇಳಿದೆ. ಇದನ್ನು ಒಪ್ಪದ ಮಹಾರಾಷ್ಟ್ರ, ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿರುವ ಪ್ರಕರಣವೊಂದರ ಬಗ್ಗೆ ಇಲ್ಲಸಲ್ಲದ್ದನ್ನು ಮಾತಾಡುತ್ತಿರುವ ಉದ್ಧವ್ ಠಾಕ್ರೆ, ವಿಚಾರಣೆಯ ದಿಕ್ಕನ್ನೇ ತಪ್ಪಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

hd-kumarswamy-tweet
ಹೆಚ್​​ಡಿಕೆ ಟ್ವೀಟ್​

ಮಹಾರಾಷ್ಟ್ರ ಚೀನಾದಂತೆ ಮಾತನಾಡುವುದನ್ನು ಮೊದಲು ಬಿಡಬೇಕು. ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ಅಣ್ಣ ತಮ್ಮಂದಿರಂತೆ ಬಾಳುತ್ತಿದ್ದಾರೆ. ಅವರ ಮನಸ್ಸುಗಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡಬಾರದು. ಗಡಿ ಎಂದ ಮೇಲೆ ಅದು ಎರಡು ಭಾಷೆ, ಎರಡೂ ರಾಜ್ಯಗಳ ಜನರ ಸಂಗಮ. ಅದರಲ್ಲಿ ನಮ್ಮವರೇ ಹೆಚ್ಚು, ನಾವೇ ಶಕ್ತಿವಂತರು ಎಂಬ ವಾದ ಸರಿಯಲ್ಲ ಎಂದು ಹೇಳಿದ್ದಾರೆ.

ಶಿವಸೇನೆಯೊಂದಿಗೆ ಅಧಿಕಾರ ಹಂಚಿಕೊಂಡಿರುವ ಕಾಂಗ್ರೆಸ್‌ ಪಕ್ಷ ಗಡಿ ವಿಚಾರದಲ್ಲಿ ಠಾಕ್ರೆಗೆ ಬುದ್ಧಿ ಹೇಳಬೇಕು. ರಾಜ್ಯ ಕಾಂಗ್ರೆಸ್‌ ನಾಯಕರು ಬಾಯಿ ಉಪಚಾರಕ್ಕೆ ಠಾಕ್ರೆ ಮಾತುಗಳನ್ನು ಖಂಡಿಸಿದರೆ ಸಾಲದು. ಬದಲಿಗೆ ಬೆಳಗಾವಿ ನಮ್ಮದೇ ಎಂಬುದನ್ನು ಮನದಟ್ಟು ಮಾಡಬೇಕು. ಬೆಳಗಾವಿ ಬಗೆಗೆ ಠಾಕ್ರೆಗೆ ಇರುವ ಭ್ರಮೆಗೆ ಚಿಕಿತ್ಸೆ ಕೊಡಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಇನ್ನೊಂದು ವಿಷಯ, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆ ಎಂದಾಗ ಠಾಕ್ರೆಗೆ ಒಂದು ಸಲಹೆ ನೀಡಿದ್ದೆ. ಕರ್ನಾಟಕ-ಮಹಾರಾಷ್ಟ್ರದ ಇತಿಹಾಸ ಓದಬೇಕೆಂಬುದು ಆ ಸಲಹೆ ಆಗಿತ್ತು. ಚರಿತ್ರೆ ಓದಿದ್ದರೆ ಮಹಾರಾಷ್ಟ್ರವು ಕನ್ನಡರಸರಿಂದ ಆಳಿಸಿಕೊಂಡ ನಾಡು ಎಂಬುದು ಅವರಿಗೂ ತಿಳಿಯುತ್ತಿತ್ತು. ಅವರು ಓದಿದಂತೆ ಕಾಣುತ್ತಿಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.