ETV Bharat / city

ಪರಿಷತ್‌ ಚುನಾವಣೆಯಲ್ಲಿ ಹೆಚ್‌ಡಿಕೆ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಹೆಚ್ಚಿದೆ: ಬಿಎಸ್‌ವೈ - ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ತೀವ್ರ ಕುತೂಹಲ ಮೂಡಿಸಿರುವ ರಾಜ್ಯ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

HDK likely to support BJP in  Council elections: Ex-CM BSY
ವಿಧಾನ ಪರಿಷತ್‌ ಚುನಾವಣೆಯಲ್ಲಿ ಹೆಚ್‌ಡಿಕೆ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಹೆಚ್ಚಿದೆ: ಮಾಜಿ ಸಿಎಂ
author img

By

Published : Dec 7, 2021, 12:56 PM IST

ಬೆಂಗಳೂರು: ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದು, ಬಹುತೇಕ ಅವರು ನಮಗೆ ಬೆಂಬಲ ಕೊಡುವ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ನೀವು ಸ್ಪರ್ಧೆ ಮಾಡದ ಕಡೆ ನಮಗೆ ಬೆಂಬಲ ಕೊಡಿ ಎಂದು ದೂರವಾಣಿ ಮೂಲಕ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿ ಮನವಿ ಮಾಡಿದ್ದೇನೆ. ಅವರು ಇಂದು ಸುದ್ದಿಗೋಷ್ಠಿ ನಡೆಸಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ, ಬಹುತೇಕ ನಮಗೆ ಬೆಂಬಲ ಕೊಡುವ ನಿರೀಕ್ಷೆಯಿದೆ ಎಂದರು.

'ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ'

ವಿಧಾನ ಪರಿಷತ್ ಚುನಾವಣೆ ದೃಷ್ಟಿಯಿಂದ ಇಂದಿನಿಂದ ಮತ್ತೆ ಪ್ರವಾಸ ಮಾಡುತ್ತಿದ್ದೇನೆ. 20 ಸ್ಥಾನಗಳಿಗೆ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅದರಲ್ಲಿ 15 ಕ್ಷೇತ್ರ ಗೆಲ್ಲುತ್ತೇವೆ. ಪದವೀಧರ ಕ್ಷೇತ್ರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಈ ಫಲಿತಾಂಶ ಬಹಳ ಮುಖ್ಯವಾಗಲಿದೆ. ಗ್ರಾಮೀಣ ಪ್ರದೇಶದ ಮತದಾರರು ನಮಗೆ ಬೆಂಬಲ ಕೊಡಲಿದ್ದು, ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. ನಮ್ಮ ಬಗ್ಗೆ ಬಹಳ ಹಗುರವಾಗಿ ವಿರೋಧ ಪಕ್ಷದ ನಾಯಕರ ಮಾತನಾಡುತ್ತಿದ್ದಾರೆ. ಇದೆಲ್ಲದಕ್ಕೂ ಚುನಾವಣೆಯಲ್ಲಿ ಉತ್ತರ ಸಿಗಲಿದೆ.

ವಿಧಾನಪರಿಷತ್‌ನಲ್ಲಿ ಬಹುಮತವಿಲ್ಲದೆ ನಮಗೆ ಗೊಂದಲವಿದೆ. ಈ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲುವ ಮೂಲಕ ಆ ಗೊಂದಲ ಈಗ ನಿವಾರಣೆಯಾಗಲಿದೆ. ನಮಗೆ ಪರಿಷತ್‌ನಲ್ಲೂ ಬಹುಮತ ಸಿಗಲಿದೆ ಎಂದು ಹೇಳಿದರು.

ಚುನಾವಣಾ ಪ್ರಚಾರ ಕಾರ್ಯದ ನಂತರ ಬೆಳಗಾವಿ ಅಧಿವೇಶನಕ್ಕೆ ಹೋಗುತ್ತೇನೆ. ಪೂರ್ವ ನಿಗದಿತ ಕಾರ್ಯಗಳ ನಿಮಿತ್ತ ಅಧಿವೇಶನದ ನಡುವೆಯೂ ವಾಪಸ್ ಬರಬೇಕಾಗುತ್ತದೆ. ಆದರೂ ಸಾಧ್ಯವಾದಷ್ಟು ಕಲಾಪದಲ್ಲಿ ಇರಲಿದ್ದೇನೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

'ಪುತ್ರ ಸಂಪುಟ ಸೇರುವ ಬಗ್ಗೆ ಚರ್ಚೆಯಾಗಿಲ್ಲ'

ಪುತ್ರ ಬಿ.ವೈ ವಿಜಯೇಂದ್ರ ಸಂಪುಟ ಸೇರುವ ಕುರಿತು ಯಾವುದೇ ಚರ್ಚೆಯಾಗಿಲ್ಲ. ಹಾಗಾಗಿ ಈ ಬಗ್ಗೆ ಯಾವುದೇ ರೀತಿಯ ಹೇಳಿಕೆ ನೀಡಲ್ಲ ಎಂದು ಬಿಎಸ್‌ವೈ ಹೇಳಿದರು.

ಇದನ್ನೂ ಓದಿ: ಜಿನೋಮಿಕ್ ಸೀಕ್ವೆನ್ಸ್​ ಟೆಸ್ಟಿಂಗ್ ಲ್ಯಾಬ್​ ಹೆಚ್ಚಳಕ್ಕೆ ಚಿಂತನೆ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.