ETV Bharat / city

ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಕೃಷಿ ಸಚಿವರಿಗೆ ಹೆಚ್​ಡಿಕೆ ಒತ್ತಾಯ

ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆಬಿ.ಸಿ.ಪಾಟೀಲ್ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡುವ ಮೂಲಕ ಆಗ್ರಹಿಸಿದ್ದಾರೆ.

HDK urges Agriculture Minister to openly apologize to farmers community
ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಕೃಷಿ ಸಚಿವರಿಗೆ ಹೆಚ್​ಡಿಕೆ ಆಗ್ರಹ
author img

By

Published : Dec 3, 2020, 6:49 PM IST

ಬೆಂಗಳೂರು: ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

HDK urges Agriculture Minister to openly apologize to farmers community
ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಕೃಷಿ ಸಚಿವರಿಗೆ ಹೆಚ್​ಡಿಕೆ ಆಗ್ರಹ

ಈ ಕುರಿತು ಟ್ವೀಟ್ ಮಾಡಿರುವ ಅವರು, ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತಲ್ಲ ಎಂದು ಸಾವಿಗೆ ಶರಣಾಗುತ್ತಾನೆ. ಹೇಡಿತನದ ಪಟ್ಟ ಕಟ್ಟಿಕೊಳ್ಳಲು ಅಲ್ಲ. ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅಪಮಾನ ಎಂದಿದ್ದಾರೆ. ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ - ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ಹಾಗೆ ಮಾಡುವವರು ಹೇಡಿಗಳು: ಬಿ.ಸಿ.ಪಾಟೀಲ್

ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.