ಬೆಂಗಳೂರು: ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿ ಅಮೃತಹಳ್ಳಿ ಠಾಣೆಯ ಹೆಡ್ಕಾನ್ಸ್ಟೇಬಲ್ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಈಶಾನ್ಯ ವಿಭಾಗದ ಡಿಸಿಪಿ ಸಿ ಕೆ ಬಾಬಾ ಅವರು ಆರೋಪಿ ಹೆಡ್ಕಾನ್ಸ್ಟೇಬಲ್ನನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಮೊನ್ನೆ ರಾತ್ರಿ ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು ಯಲಹಂಕ ನ್ಯೂಟೌನ್ನ ಹೌಸಿಂಗ್ ಬೋರ್ಡ್ ಬಳಿ ಮೂತ್ರ ವಿಸರ್ಜನೆಗೆ ಹೆಡ್ಕಾನ್ಸ್ಟೇಬಲ್ ಚಂದ್ರಶೇಖರ್ ಬೈಕ್ ನಿಲ್ಲಿಸಿದ್ದರು. ಈ ವೇಳೆ ಮಹಿಳೆಯೊಬ್ಬರು ಬೀದಿ ಬದಿಯ ನಾಯಿಗಳಿಗೆ ಊಟ ನೀಡಲು ಬಂದಿದ್ದರು. ಈ ಸಮಯಲ್ಲಿ ಚಂದ್ರಶೇಖರ್ ಮಹಿಳೆಗೆ ಮರ್ಮಾಂಗ ತೋರಿಸಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಆ ಬಳಿಕ ಮಹಿಳೆ ಮತ್ತು ಹೆಡ್ಕಾನ್ಸ್ಟೇಬಲ್ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಸ್ಥಳೀಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ. ವಿಷಯ ಬೆಳಕಿಗೆ ಬರುತ್ತಿದ್ದಂತೆ ಪರಿಶೀಲನೆ ನಡೆಸಿದ ಯಲಹಂಕ ನ್ಯೂಟೌನ್ ಪೊಲೀಸರು ಹೆಡ್ಕಾನ್ಸ್ಟೇಬಲ್ ವಿರುದ್ಧ ಐಪಿಸಿ ಸೆಕ್ಷನ್ 354(a) ಹಾಗೂ 509 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
(ಇದನ್ನೂ ಓದಿ: ಮತಾಂತರ ನಿಷೇಧ ವಿಧೇಯಕಕ್ಕೆ ವಿರೋಧ: ಸದನದಲ್ಲೇ ಪ್ರತಿ ಹರಿದು ಡಿಕೆಶಿ ಕಿಡಿ)