ETV Bharat / city

ಮದ್ಯಪಾನ, ಧೂಮಪಾನದಂತಹ ದುಶ್ಚಟಗಳನ್ನು ತ್ಯಜಿಸಿ: ಹಿರಿಯ ನಾಗರೀಕರಿಗೆ ಸಚಿವ ಶ್ರೀರಾಮುಲು ಸಲಹೆ

ಹಿರಿಯ ನಾಗರೀಕರು ವರ್ಷಕ್ಕೊಮ್ಮೆಯಾದರೂ ರಕ್ತದೊತ್ತಡ ಮತ್ತು ಡಯಾಬಿಟಿಕ್​ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ಆರೋಗ್ಯ ಸಚಿವ ಬಿ.‌ಶ್ರೀರಾಮುಲು ಸಲಹೆ ನೀಡಿದ್ದಾರೆ.

Health Minister B. Sriramulu  Advice to  Senior Citizens
ಮಧ್ಯಪಾನ, ಧೂಮಪಾನದಂತಹ ದುಶ್ಚಟಗಳನ್ನು ತ್ಯಜಿಸಿ: ನಾಗರೀಕರಿಗೆ ಶ್ರೀರಾಮುಲು ಸಲಹೆ
author img

By

Published : Oct 1, 2020, 5:25 PM IST

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕವಲ್ಲದ ಹೃದಯ ಸಂಬಂಧಿ ಕಾಯಿಲೆಗಳು ಹಲವರ ಜೀವವನ್ನು ಬಲಿ ತೆಗೆದುಕೊಳ್ಳುತ್ತಿವೆ. ಹೀಗಾಗಿ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳನ್ನು ತ್ಯಜಿಸುವುದರ ಜತೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಆರೋಗ್ಯ ಸಚಿವ ಬಿ. ‌ಶ್ರೀರಾಮುಲು ಅವರು ಹಿರಿಯ ನಾಗರೀಕರಿಗೆ ಸಲಹೆ ನೀಡಿದ್ದಾರೆ.

ಮದ್ಯಪಾನ, ಧೂಮಪಾನದಂತಹ ದುಶ್ಚಟಗಳನ್ನು ತ್ಯಜಿಸಿ: ಹಿರಿಯ ನಾಗರೀಕರಿಗೆ ಶ್ರೀರಾಮುಲು ಸಲಹೆ

ಇಂದು ವಿಶ್ವ ಹಿರಿಯ ನಾಗರೀಕರ ಆರೈಕೆ ದಿನ ಹಾಗೂ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಝೂಮ್ ಆ್ಯಪ್​ ಮೂಲಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವರ್ಷಕ್ಕೊಮ್ಮೆಯಾದರೂ ರಕ್ತದೊತ್ತಡ ಮತ್ತು ಡಯಾಬಿಟಿಕ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು.

ರಾಜ್ಯ ಸರ್ಕಾರ ಹಿರಿಯ ನಾಗರೀಕರಿಗೆ ಉತ್ತಮ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ಒದಗಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಕ್ತದೊತ್ತಡ ನಿಯಂತ್ರಣಕ್ಕಾಗಿ ಇಂದಿನಿಂದ ರಾಯಚೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದರು.

ಈ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ವಿವಿಧ ಸಂಸ್ಥೆಗಳನ್ನು ಹಾಗೂ ತಮ್ಮ 91 ನೇ ವಯಸ್ಸಿನಲ್ಲೂ ಕೋವಿಡ್​ನಿಂದ ಗುಣಮುಖರಾಗಿ ಆರೋಗ್ಯ ದೃಢತೆ ಸಾಧಿಸಿದ ಕೆಂಗೇರಿಯ ಗುರುಬಸಪ್ಪ ಅವರನ್ನು ಇದೇ ಸಂದರ್ಭದಲ್ಲಿ ಸಚಿವರು ಸನ್ಮಾನಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಜಾವೀದ್ ಅಕ್ತರ್ ಹಾಗೂ ಇಲಾಖೆಯ ಮತ್ತಿತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.