ಬೆಂಗಳೂರು : ಕೋವಿಡ್ ಎರಡನೇ ಅಲೆ ಹೆಚ್ಚಿರುವ ಹಿನ್ನೆಲೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಅವರು ಕೋವಿಡ್ ಪರಿಸ್ಥಿತಿ ಪರಾಮರ್ಶಿಸಲು 11 ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.
ರಾಜ್ಯದ ಪರವಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ವಿಕಾಸಸೌಧದಿಂದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಇದನ್ನೂ ಓದಿ: ರಾಜ್ಯದಲ್ಲಿಂದು 6 ಸಾವಿರ ದಾಟಿದ ಕೋವಿಡ್ ಕೇಸ್: 39 ಮಂದಿ ಸಾವು
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ಅದರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡುತ್ತಿದ್ದಾರೆ.