ETV Bharat / city

ಕಳೆದ 50 ವರ್ಷಗಳಲ್ಲಿ ಇದೇ ಮೊದಲೆನ್ನುವಂತೆ ಬೆಂಗಳೂರಲ್ಲಿ ಮೈಕೊರೆಯುವ ಚಳಿ! - weather Cold weather

ಇಂದು ಮತ್ತು ನಾಳೆಯೂ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ..

heavy Cold weather in Bangalore
ಬೆಂಗಳೂರಿನಲ್ಲಿ ಚಳಿ
author img

By

Published : May 13, 2022, 5:29 PM IST

Updated : May 13, 2022, 5:54 PM IST

ಬೆಂಗಳೂರು : ಅಸಾನಿ ಚಂಡಮಾರುತದ ಪರಿಣಾಮದಿಂದ ನಗರದಲ್ಲಿ ಬೇಸಿಗೆ ಸಮಯದಲ್ಲೂ ಮೈ ಕೊರೆಯುವ ಚಳಿಯ ಅನುಭವ ಉಂಟಾಗುತ್ತಿದೆ. ಇದಕ್ಕೆ ಕಾರಣ ಉಷ್ಣಾಂಶ ಅತ್ಯಂತ ಕಡಿಮೆಯಾಗಿರುವುದು. ಇಂದು ನಗರದಲ್ಲಿ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕಳೆದ 50 ವರ್ಷಗಳಲ್ಲಿ ಅತ್ಯಂತ ಕಡಿಮೆ ಉಷ್ಣಾಂಶ ಇದಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ. 1972ರ ನಂತರ ಇದೇ ಮೊದಲು ಇಷ್ಟು ಪ್ರಮಾಣದ ಚಳಿ ವಾತಾವರಣ ಇದ್ದು, ಇದು ಸಾಮಾನ್ಯಕ್ಕಿಂತ 10 ಡಿಗ್ರಿ ಕಡಿಮೆ ಉಷ್ಣಾಂಶ ಎಂದು ಹೇಳಿದ್ದಾರೆ.

ಮಳೆ : ಇಂದು ಮತ್ತು ನಾಳೆಯೂ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿರುವುದು..

ಗುಡುಗು ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ. ಮೇ 15,16ರಂದು ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಮೇ 17ರಂದು ಮಳೆ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಹಲವು ವರ್ಷಗಳಿಂದ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ‌ ಶವ ಪತ್ತೆ.. ಬೆಳಕಿಗೆ ಬಂದಿದ್ದು ಹೀಗೆ!

ಮುಂಗಾರು ಪ್ರವೇಶ: ಮುಂಗಾರು ಮಾರುತವು ದಕ್ಷಿಣ ಅಂಡಮಾನ್ ಸಮುದ್ರ ಹಾಗೂ ಆಗ್ನೇಯ ಬಂಗಾಳಕೊಲ್ಲಿಯತ್ತ ಮೇ 15ರ ವೇಳೆಗೆ ಪ್ರವೇಶಿಸುವ ಸಾಧ್ಯತೆ ಎಂದು ವರದಿ ತಿಳಿಸಿದ್ದು, ಆ ಪ್ರಕಾರ ದೇಶಕ್ಕೆ ಮುಂಗಾರು ಈ ವರ್ಷ ನಾಲ್ಕೈದು ದಿನ ಬೇಗ ಪ್ರವೇಶಿಸುವ ಸಾಧ್ಯತೆ ಇದೆ. ಮೇ 25ರ ನಂತರ ಮಳೆಗಾಲ ಆರಂಭವಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

Last Updated : May 13, 2022, 5:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.