ETV Bharat / city

ಬೆಂಗಳೂರಿನಲ್ಲಿ ಇಂದು, ನಾಳೆ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ - ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

heavy rain in Bangalore
ಬೆಂಗಳೂರಿನಲ್ಲಿ ಧಾರಾಕಾರ ಮಳೆ
author img

By

Published : May 17, 2022, 6:40 AM IST

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಗರದಲ್ಲಿ ಸುರಿಯುತ್ತಿರುವ ಮಳೆ ಇಂದು ಮತ್ತು ನಾಳೆ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಆರೆಂಜ್ ಅಲರ್ಟ್ ನೀಡಲಾಗಿದೆ. ನಗರದಲ್ಲಿ 7 ದಿನಗಳಲ್ಲಿ ವಾಡಿಕೆಯಂತೆ 21 ಮಿ.ಮೀ ಮಳೆಯ ಬದಲಾಗಿ 35 ಮಿ.ಮೀ ಮಳೆ ಸುರಿದಿದೆ. ಇದು ಶೇ.64ಕ್ಕೂ ಹೆಚ್ಚು ಎಂದು ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಅಸ್ಸೋಂ ರಣಭೀಕರ ಮಳೆ: ಐವರು ಸಾವು, 230ಕ್ಕೂ ಅಧಿಕ ಹಳ್ಳಿಗಳಿಗೆ ಹಾನಿ

ಸೋಮವಾರ ಸಂಜೆಯಿಂದ ನಗರದ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ 4 ಗಂಟೆಯ ನಂತರ ಭಾರಿ ಮಳೆ ಬಿದ್ದಿದೆ. ಕಚೇರಿ ಕೆಲಸ ಮುಗಿಸಿಕೊಂಡು ಮನೆ ಕಡೆ ತೆರಳುತ್ತಿದ್ದ ಜನರು ಮಳೆಯಲ್ಲಿ ಪರದಾಡಿದರು. ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದರಿಂದ ಹಲವು ಬಡಾವಣೆಗಳಲ್ಲಿನ ನಿವಾಸಿಗಳು ಕೂಡ ಸಂಕಷ್ಟ ಎದುರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.