ETV Bharat / city

ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ - ಕರ್ನಾಟಕ ಮಳೆ ಅಪ್ಡೇಟ್​​

ಬೆಂಗಳೂರಿನಲ್ಲಿ ಕಳೆದ ರಾತ್ರಿ ಹೊತ್ತಿಗೆ ಜೋರು ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Heavy rain lashed Bengaluru
ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ
author img

By

Published : Jul 31, 2022, 6:55 AM IST

ಬೆಂಗಳೂರು: ನಗರದ ಹಲವೆಡೆ ಶನಿವಾರ ರಾತ್ರಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಯಿತು. ಮಧ್ಯ ರಾತ್ರಿಯವರೆಗೂ ವಾಹನ ಸವಾರರು ಪರದಾಡಿದರು. ರಾತ್ರಿ 9.30ರಿಂದ ಮಳೆ ಸುರಿಯಲಾರಂಭಿಸಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನಕ್ಕೆ ತೊಂದರೆಯಾಯಿತು.

ಆರ್​ಆರ್ ​ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೇಸ್​ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಜಡಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥ ನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ, ನಾಗರಬಾವಿ ಸೇರಿ ಬಹುತೇಕ ಕಡೆ ಸಾಧಾರಣ ಮಳೆ ಸುರಿದಿದೆ.

ಪ್ರಮುಖ ರಸ್ತೆಗಳು ಜಲಾವೃತ: ಮಲ್ಲೇಶ್ವರ, ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳು, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆಆರ್​​ ಪುರ ಸೇರಿ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ಸ್ಮಾರ್ಟ್ ಸಿಟಿ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯಗಳು ಕಾಣಸಿಕ್ಕಿವೆ. ಮಳೆಯಿಂದ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಬಿಬಿಎಂಪಿ ನಿಯಂತ್ರಣ ಕಚೇರಿ ಮಾಹಿತಿ ನೀಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಭಾರಿ ಮಳೆ ಮುಂದುವರಿಕೆ: ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.