ETV Bharat / city

ಬೆಂಗಳೂರಲ್ಲಿ 4ನೇ ದಿನವೂ ಭಾರಿ ಮಳೆ: ರಾಜ್ಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಮುಂಗಾರು ಆರಂಭ

ರಾಜ್ಯವನ್ನು ಮುಂಗಾರು ಪ್ರವೇಶಿಸಿದ್ದು, ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಭಾರಿ ಮಳೆಯಾಗಿದೆ. ಕರ್ನಾಟಕ ಅಷ್ಟೇ ಅಲ್ಲ ಕರ್ನಾಟಕದ ಸಂಪೂರ್ಣ ಕರವಾಳಿ, ಉತ್ತರ ಕರ್ನಾಟಕದ ಬಹುತೇಕ ಕಡೆ. ಗೋವಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶದ ಕೆಲ ಕಡೆಗಳಲ್ಲಿ ಮಾನ್ಸೂನ್​ ಎಂಟ್ರಿ ಕೊಟ್ಟಿದೆ.

rain
rain
author img

By

Published : Jun 5, 2021, 7:28 PM IST

Updated : Jun 5, 2021, 7:55 PM IST

ಬೆಂಗಳೂರು: ರಾಜಧಾನಿಯಲ್ಲಿ ಸತತ ನಾಲ್ಕನೇ ದಿನವೂ ಮಳೆ ಮುಂದುವರಿದಿದೆ. ಇಂದು ಸಾಯಂಕಾಲ ಸುಮಾರು 5 ಗಂಟೆಯಿಂದ ನಗರದಲ್ಲಿ ಮಳೆ ಆರಂಭವಾಗಿದ್ದು, ವಸಂತನಗರ, ರಾಜಾಜಿನಗರ, ಮಲೇಶ್ವರಂ ಮುಂತಾದ ಪ್ರಮುಖ ಬಡಾವಣೆಗಳು ಜಲಾವೃತಗೊಂಡಿವೆ.

ಇನ್ನು ಮಹಾರಾಷ್ಟ್ರ ಗೋವಾದ ಕೆಲ ಕಡೆ ಭರ್ಜರಿ ಮಳೆ ಆಗುತ್ತಿದೆ. ಇನ್ನು ತೆಲಂಗಾಣ ಆಂಧ್ರಪ್ರದೇಶ, ತಮಿಳುನಾಡಲ್ಲೂ ಕೆಲಕಡೆ ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ IMD ತಿಳಿಸಿದೆ.

ಬೆಂಗಳೂರಲ್ಲಿ 4ನೇ ದಿನವೂ ಭಾರಿ ಮಳೆ: ರಾಜ್ಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಮುಂಗಾರು ಆರಂಭ

ಮುಂಗಾರಿನ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುತ್ತಿದ್ದು, ರಾಜ್ಯದ ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ. ರಾಜಧಾನಿಯಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ಕೂಡ ನೀಡಿದ್ದಾರೆ.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿಕೆ:

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಾಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ನಿನ್ನೆ ನೈರುತ್ಯ ಮಾನ್ಸೂನ್ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರವೇಶಿಸಿದೆ. ಉತ್ತರ ಒಳನಾಡಿನಲ್ಲಿ ಕೂಡ ಬಹತೇಕ ಭಾಗಗಳಲ್ಲಿ ಮುಂಗಾರು ಮಳೆ ಆರಂಭವಾಗಿದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ 4ನೇ ದಿನವೂ ಭಾರೀ ಮಳೆ
ಬೆಂಗಳೂರಲ್ಲಿ 4ನೇ ದಿನವೂ ಭಾರೀ ಮಳೆ
ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದ್ದು, ನಾಳೆ ಕೂಡ ಬಹುತೇಕ ಎಲ್ಲ ಸ್ಥಳಗಳಲ್ಲಿ ವರುಣ ಆರ್ಭಟಿಸಲಿದ್ದಾನೆ. ನಾಡಿದ್ದು ಮಳೆಯ ಪ್ರಮಾಣ ತಾತ್ಕಾಲಿಕವಾಗಿ ಕುಗ್ಗಲಿದ್ದು, ಸ್ವಲ್ಪ ದಿನಗಳ ಕಾಲ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿಯಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Last Updated : Jun 5, 2021, 7:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.