ಬೆಂಗಳೂರು: ರಾಜಧಾನಿಯಲ್ಲಿ ಸಂಜೆಯ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿತು. ತಡರಾತ್ರಿ ರಾತ್ರಿ 3 ಗಂಟೆಗೆ ಪ್ರಾರಂಭವಾದ ಮಳೆ ಇನ್ನೂ ಸಹ ಜಿಟಿ ಜಿಟಿಯಾಗಿ ಸುರಿಯುತ್ತಲೇ ಇದೆ. ಇದರಿಂದಾಗಿ ಕಚೇರಿಗಳಿಂದ ಮನೆಗೆ ತೆರಳಲು ವಾಹನ ಸಾವರರು ಪರದಾಡುತ್ತಿದ್ದ ದೃಶ್ಯ ಕಂಡು ಬಂದಿತು.
ಸಂಜೆ ವಾಯು ವಿಹಾರಕ್ಕೆ ತೆರಳುವ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಪರಿಪಾಟಲು ಪಡುವಂತಾಗಿದೆ. ವಾಹನ ಸವಾರರ ಸ್ಥಿತಿಯಂತೂ ಅಯೋಮಯವಾಗಿದೆ. ನಗರದ ಪ್ರಮುಖ ಸ್ಥಳಗಳಾದ ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಕಾರ್ಪೊರೇಷನ್, ಕೆ.ಆರ್ ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರಂ, ಇಂದಿರಾ ನಗರ ಇನ್ನಿತರ ಕಡೆ ಮಳೆ ಸುರಿದು ಜನ ಜೀವನ ಅಸ್ಥವ್ಯಸ್ಥಗೊಂಡಿತು. ವಾಯುಭಾರ ಕುಸಿತದಿಂದ ನಗರದಲ್ಲಿ ವರ್ಷಧಾರೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.