ETV Bharat / city

ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ: ಸಾರ್ವಜನಿಕರ ಪರದಾಟ - ಕರ್ನಾಟಕ ಹವಾಮಾನ ವರದಿ

ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಬಡಾವಣೆಗಳ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.

Heavy rain in Bengaluru
ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ
author img

By

Published : Jun 6, 2022, 6:50 AM IST

ಬೆಂಗಳೂರು: ಕೇರಳದಿಂದ ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದು, ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ನಗರದಲ್ಲೂ ಕೂಡ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನ ಹೈರಾಣಾಗಿದ್ದಾರೆ. ಸರಿ ಸುಮಾರು 10 ಗಂಟೆಗೆ ಪ್ರಾರಂಭವಾದ ಮಳೆ ತಡ ರಾತ್ರಿಯಾದರೂ ಎಡೆ ಬಿಡದೇ ಸುರಿಯುತ್ತಿದೆ.

ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ

ಮೈಸೂರು ರಸ್ತೆ, ಬನಶಂಕರಿ, ಚಂದ್ರಾಲೇಔಟ್, ವಿಜಯನಗರ, ಮಾಗಡಿ ರಸ್ತೆ, ಸುಂಕದಕಟ್ಟೆ, ಯಶವಂತಪುರ, ನಾಗರಬಾವಿ, ಶಾಂತಿನಗರ, ಆಸ್ಟಿನ್ ಟೌನ್, ಮಲ್ಲೇಶ್ವರಂ ಸೇರಿದಂತೆ ಹಲವು ಬಡಾವಣೆಗಳ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಧಾರಾಕಾರ ಸುರಿದ ಮಳೆಯಿಂದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸಂಚರಿಸಲು ಸಾಧ್ಯವಾಗದೇ ಜನರು ಪರದಾಡುವಂತಾಗಿತ್ತು.

ಯೆಲ್ಲೋ ಅಲರ್ಟ್: ಇನ್ನೂ ಮೂರ್ನಾಲ್ಕು ದಿನ ರಾಜಧಾನಿಯಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಮುಂಗಾರು ಚುರುಕು.. ಹಲವೆಡೆ ಆಲಿಕಲ್ಲು ಸಹಿತ ಮಳೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.