ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಎಲ್ಲ ಆಯಾ ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಿಜಾಪುರ,ಬೀದರ್, ಗದಗ್, ಧಾರವಾಡ,ಕಲ್ಬುರ್ಗಿ,ರಾಯಚೂರ್ ಹಾಗೂ ಬೆಳಗಾಂ,ಬಾಗಲಕೋಟೆ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ್,ಕೊಡಗು,ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.