ETV Bharat / city

ಇನ್ನೂ 3 ದಿನ ರಾಜ್ಯದಲ್ಲಿ ಮುಂದುವರೆಯುವ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ - Bangalore

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಅದು ಚಂಡಮಾರುತವಾಗಿ ಪರಿವರ್ತನೆಯಾಗುತ್ತಿದೆ. ಆದರೂ ರಾಜ್ಯದ ಮೇಲೆ ಅದರ ನೇರ ಪರಿಣಾಮ ಉಂಟಾಗುವುದಿಲ್ಲ. ಚಂಡಮಾರುತ ಒಡಿಶಾ ಕಡೆಗೆ ಚಲಿಸಿದೆ. ಹೀಗಾಗಿ, ಅಕ್ಟೊಬರ್ 16ರ ನಂತರ ಮತ್ತೆ ವಾತಾವರಣದಲ್ಲಿ ಬದಲಾವಣೆ ಉಂಟಾಗಿ ಹಿಂಗಾರು ಮಳೆ ಆರಂಭವಾಗಲಿದೆ ಎಂದಿದ್ದಾರೆ..

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Oct 13, 2021, 8:32 PM IST

ಬೆಂಗಳೂರು : ಕಳೆದ ಒಂದು ವಾರದಿಂದ ಎಡೆಬಿಡಡೆ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಸುಳಿ ಗಾಳಿಯ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದೆ.

ಬುಧವಾರ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ.

ಇದರಿಂದ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ತೊಂದರೆ ಉಂಟಾಗಿರುವುದು ವರದಿಯಾಗಿದೆ. ನೈರುತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಿದೆ. ಇನ್ನೆರಡು ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಅ.16ರ ನಂತರ ಮಳೆ ಇಳಿಮುಖ : ಮುಂಗಾರು ಮರಳುವಾಗ ಮತ್ತು ಈಶಾನ್ಯ ಹಿಂಗಾರು ಆರಂಭವಾಗುವ ಪರ್ವಕಾಲದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವುದು ವಾಡಿಕೆ. ಅದೇ ರೀತಿ ಈಗಲೂ ಮಳೆ ಮುಂದುವರೆದಿದೆ.

ಅಕ್ಟೋಬರ್‌ ತಿಂಗಳಲ್ಲಿ ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಲಿದೆ. ಈಗಾಗಲೇ ರಾಜ್ಯದಲ್ಲಿ ಮಳೆ ಬಿದ್ದಿದೆ. ಅಕ್ಟೋಬರ್ 16ರ ನಂತರ ಮಳೆ ಇಳಿಮುಖವಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಚಂಡಮಾರುತ ಒಡಿಶಾ ಕಡೆಗೆ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಅದು ಚಂಡಮಾರುತವಾಗಿ ಪರಿವರ್ತನೆಯಾಗುತ್ತಿದೆ. ಆದರೂ ರಾಜ್ಯದ ಮೇಲೆ ಅದರ ನೇರ ಪರಿಣಾಮ ಉಂಟಾಗುವುದಿಲ್ಲ. ಚಂಡಮಾರುತ ಒಡಿಶಾ ಕಡೆಗೆ ಚಲಿಸಿದೆ. ಹೀಗಾಗಿ, ಅಕ್ಟೊಬರ್ 16ರ ನಂತರ ಮತ್ತೆ ವಾತಾವರಣದಲ್ಲಿ ಬದಲಾವಣೆ ಉಂಟಾಗಿ ಹಿಂಗಾರು ಮಳೆ ಆರಂಭವಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.