ETV Bharat / city

ಉಕ್ರೇನ್​​ನಿಂದ ವಾಪಸ್​​ ಆದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ.. ಅವರ ನೆರವಿಗೆ ಕೇಂದ್ರ-ರಾಜ್ಯ ಸರ್ಕಾರಗಳು ಧಾವಿಸಬೇಕು: ಹೆಚ್​​ಡಿಕೆ

ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳ ಬಗ್ಗೆ ಉಪೇಕ್ಷೆ ಮಾಡಿದರೆ ಸಹಿಸುವ ಪ್ರಶ್ನೆ ಇಲ್ಲ. ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಕೇಂದ್ರ-ರಾಜ್ಯ ಸರ್ಕಾರಗಳ ಹೊಣೆ. ಇನ್ನಾದರೂ ನೀಟ್‌ ವಿರುದ್ಧ ಎಲ್ಲಾ ರಾಜ್ಯಗಳು ಸಂಘಟಿತವಾಗಿ ದನಿ ಎತ್ತಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು..

H. D. Kumaraswamy
ಹೆಚ್.ಡಿ ಕುಮಾರಸ್ವಾಮಿ
author img

By

Published : Apr 25, 2022, 1:16 PM IST

ಬೆಂಗಳೂರು : ಯುದ್ಧ ಪೀಡಿತ ಉಕ್ರೇನ್​​ನಿಂದ ವಾಪಸ್​​ ಆದ 20 ಸಾವಿರಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅವರ ನೆರವಿಗೆ ರಾಜ್ಯ-ಕೇಂದ್ರ ಸರ್ಕಾರಗಳು ಧಾವಿಸಬೇಕು ಎಂದು ನಾನು ಒತ್ತಾಯಿಸುತ್ತಲೇ ಇದ್ದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ವಿದ್ಯಾರ್ಥಿಗಳ ನೆರವಿಗೆ ನಾವಿದ್ದೇವೆ, ಹೆದರಬೇಕಿಲ್ಲ ಎಂದು ಹೇಳುತ್ತಿದ್ದ ಎರಡೂ ಸರ್ಕಾರಗಳು, ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ. ಒಂದೆಡೆ ನೀಟ್ ವ್ಯವಸ್ಥೆಯನ್ನು ಇಡೀ ದೇಶದ ಮೇಲೆ ಹೇರಿ, ವೈದ್ಯಕೀಯ ಶಿಕ್ಷಣವನ್ನು ಶ್ರೀಮಂತರಿಗೆ ಸಮರ್ಪಣೆ ಮಾಡಿದ ಪಾಪದ ಫಲವಷ್ಟೇ ಇದು ಎಂದಿದ್ದಾರೆ.

  • ನೀಟ್ ಅನ್ನು ಬಲವಂತವಾಗಿ ಹೇರಿ, ಟ್ಯೂಷನ್‌ ಅಂಗಡಿಗಳಿಗೆ ಬಿಸಿನೆಸ್‌ ಮಾಡಿಕೊಟ್ಟು, ವೈದ್ಯ ಶಿಕ್ಷಣವನ್ನು ಬಡ-ಮಧ್ಯಮ ವರ್ಗದ ಮಕ್ಕಳಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ. ಇದು ಶೈಕ್ಷಣಿಕ ಅನ್ಯಾಯ-ಅಸಮಾನತೆ ಹೆಚ್ಚಿಸುತ್ತಿದೆಯಷ್ಟೇ ಅಲ್ಲ, ಸಂವಿಧಾನದ ಆಶಯಕ್ಕೂ ವಿರುದ್ಧವಾಗಿದೆ. 6/7

    — H D Kumaraswamy (@hd_kumaraswamy) April 25, 2022 " class="align-text-top noRightClick twitterSection" data=" ">

ಉಕ್ರೇನ್ ದೇಶದಿಂದ ವಾಪಸ್ ಬಂದ ರಾಜ್ಯದ 700ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಕೊಟ್ಟ ಭರವಸೆ ಏನಾಯಿತು?. ರಾಜ್ಯ ಸರ್ಕಾರ ಕೇಂದ್ರದ ಕಡೆ ಮುಖ ಮಾಡಿ ಕೂತಿದೆ. ಇದು ಸರಿಯಲ್ಲ. ಕೇಂದ್ರದ ಮೇಲೆ ಒತ್ತಡ ಹೇರಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಮಧ್ಯಪ್ರವೇಶ ಮಾಡಿ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲೇಬೇಕು ಎಂದು ಹೆಚ್​​​ಡಿಕೆ ಒತ್ತಾಯಿಸಿದ್ದಾರೆ. ಭಾರತದಲ್ಲಿ ವ್ಯಾಸಂಗ ಮಾಡಲಾಗದೇ, ಅತ್ತ ಉಕ್ರೇನ್​​ಗೂ ಮರಳಿ ಹೋಗಲಾರದೆ ಈ ವಿದ್ಯಾರ್ಥಿಗಳೆಲ್ಲರೂ ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ದೇಶದಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣ ಹೆಚ್ಚು ದುಬಾರಿ ಎನ್ನುವ ಕಾರಣಕ್ಕೆ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಿದ್ದಾರೆ. ನಮ್ಮಲ್ಲಿ ಇಡೀ ಶಿಕ್ಷಣ ವ್ಯವಸ್ಥೆ ಹಣವಂತರು, ರಾಜಕಾರಣಿಗಳ ಕಪಿಮುಷ್ಠಿಯಲ್ಲಿದೆ. ಶಿಕ್ಷಣ ಲಾಭದಾಯಕ ಉದ್ಯಮವಾಗಿ ಬಡ-ಮಧ್ಯಮ ವರ್ಗದ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಗಗನಕುಸುಮವಾಗಿದೆ.

  • ಉಕ್ರೇನ್ʼನಿಂದ ಬಂದ ವಿದ್ಯಾರ್ಥಿಗಳ ಬಗ್ಗೆ ಉಪೇಕ್ಷೆ ಮಾಡಿದರೆ ಸಹಿಸುವ ಪ್ರಶ್ನೆ ಇಲ್ಲ. ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಕೇಂದ್ರ-ರಾಜ್ಯ ಸರಕಾರಗಳ ಹೊಣೆ.

    ಇನ್ನಾದರೂ ನೀಟ್‌ ವಿರುದ್ಧ ಎಲ್ಲಾ ರಾಜ್ಯಗಳು ಸಂಘಟಿತವಾಗಿ ದನಿ ಎತ್ತಬೇಕಿದೆ. 7/7

ನೀಟ್ ಅನ್ನು ಬಲವಂತವಾಗಿ ಹೇರಿ, ಟ್ಯೂಷನ್‌ ಅಂಗಡಿಗಳಿಗೆ ಬ್ಯುಸಿನೆಸ್‌ ಮಾಡಿಕೊಟ್ಟು, ವೈದ್ಯ ಶಿಕ್ಷಣವನ್ನು ಬಡ-ಮಧ್ಯಮ ವರ್ಗದ ಮಕ್ಕಳಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ. ಇದು ಶೈಕ್ಷಣಿಕ ಅನ್ಯಾಯ-ಅಸಮಾನತೆ ಹೆಚ್ಚಿಸುತ್ತಿದೆಯಷ್ಟೇ ಅಲ್ಲ, ಸಂವಿಧಾನದ ಆಶಯಕ್ಕೂ ವಿರುದ್ಧವಾಗಿದೆ.

ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳ ಬಗ್ಗೆ ಉಪೇಕ್ಷೆ ಮಾಡಿದರೆ ಸಹಿಸುವ ಪ್ರಶ್ನೆ ಇಲ್ಲ. ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಕೇಂದ್ರ-ರಾಜ್ಯ ಸರ್ಕಾರಗಳ ಹೊಣೆ. ಇನ್ನಾದರೂ ನೀಟ್‌ ವಿರುದ್ಧ ಎಲ್ಲಾ ರಾಜ್ಯಗಳು ಸಂಘಟಿತವಾಗಿ ದನಿ ಎತ್ತಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ 'ನೀಟಾಗಿ' ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? : ಹೆಚ್​ಡಿಕೆ ಟ್ವೀಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.