ಬೆಂಗಳೂರು: ಬೆಂಗಳೂರು ಸೇರಿದಂತೆ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಉಗ್ರರ ಹಿಟ್ ಲಿಸ್ಟ್ನಲ್ಲಿ ಈ ಎರಡು ನಗರಗಳಿದ್ದು ಕಟ್ಟೆಚ್ಚರವಹಿಸಲಾಗಿದೆ.
ದೆಹಲಿಯ ಎಟಿಎಸ್ ಅಧಿಕಾರಿಗಳು ದಾಳಿ ನಡೆಸಿ 6 ಮಂದಿ ಉಗ್ರಗಾಮಿಗಳನ್ನು ಸೆರೆಹಿಡಿದ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮೈಸೂರು ಹಾಗು ಬೆಂಗಳೂರನ್ನು ಟಾರ್ಗೆಟ್ ಮಾಡಿರುವ ಉಗ್ರರು ದಸರಾ ಹಬ್ಬವನ್ನು ಗುರಿಯಾಗಿಸಿಕೊಂಡು ಷಡ್ಯಂತ್ರ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ದಸರಾ ಜಂಬೂ ಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಜನ ಬರ್ತಾರೆ. ಇದನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹಾಗು ಮೈಸೂರಿನಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಹೆಚ್ಚಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಉಗ್ರರನ್ನು ಎದುರಿಸಲು ಹಾಗು ವಿಧ್ವಂಸಕ ಕೃತ್ಯಗಳನ್ನು ಯಶಸ್ವಿಯಾಗಿ ತಡೆಗಟ್ಟಲು ಸುಸಜ್ಜಿತ ಗರುಡ ಹಾಗೂ ಸ್ವಾಟ್ ಕಮಾಂಡೋಗಳಿದ್ದಾರೆ. ಈಗಾಗಲೇ 60 ಮಂದಿ ತರಬೇತಿ ಮುಗಿಸಿದ್ದಾರೆ. ಹಾಗಾಗಿ ಯಾರೂ ಸಹ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.