ETV Bharat / city

ಶಬ್ಧ ಮಾಲಿನ್ಯ.. ನಿಯಂತ್ರಣ ಕ್ರಮಗಳ ವರದಿ ಕೇಳಿದ ಹೈಕೋರ್ಟ್

author img

By

Published : Apr 20, 2021, 8:26 PM IST

ಶಬ್ಧ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಈವರೆಗೆ ಸಲ್ಲಿಕೆಯಾಗಿರುವ ದೂರುಗಳನ್ನು ಆಧರಿಸಿ ಕೈಗೊಂಡಿರುವ ಕ್ರಮಗಳೇನು ಎಂಬುದರ ವಿವರಣೆ ನೀಡುವಂತೆ ಕೆಎಸ್​ಪಿಸಿಬಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿತು..

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ಶಬ್ಧ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ವರದಿ ಸಲ್ಲಿಸುವಂತೆ ಹೈಕೋರ್ಟ್ ನಗರ ಪೊಲೀಸ್ ಆಯುಕ್ತ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶಿಸಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಶಬ್ಧ ಮಾಲಿನ್ಯ ನಿಯಂತ್ರಣ ಮಾಡಲು ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಕೋರಿ ನಗರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರಧ್ವಾಜ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ, ಶಬ್ಧ ಮಾಲಿನ್ಯ ನಿಯಂತ್ರಣ ಕಾಯ್ದೆ ಹಾಗೂ ಪರಿಸರ ಸಂರಕ್ಷಣೆ ಕಾಯ್ದೆ ಅಡಿ ಶಬ್ಧ ಮಾಲಿನ್ಯವನ್ನು ನಿಯಂತ್ರಿಸಲು ಕೆಎಸ್​ಪಿಸಿಬಿ ಅಗತ್ಯ ಕಾನೂನು ಕ್ರಮಗಳನ್ನು ಜರುಗಿಸಬೇಕು. ಆದರೆ, ಮಂಡಳಿ ತನ್ನಲ್ಲಿಗೆ ಬರುವ ದೂರುಗಳನ್ನು ಪೊಲೀಸರಿಗೆ ವರ್ಗಾಯಿಸುತ್ತಾ ಪೋಸ್ಟ್‌ಮೆನ್​ನಂತೆ ಕೆಲಸ ಮಾಡುತ್ತಿದೆ ಎಂದು ಮಂಡಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

ಅಲ್ಲದೆ ಶಬ್ಧ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಈವರೆಗೆ ಸಲ್ಲಿಕೆಯಾಗಿರುವ ದೂರುಗಳನ್ನು ಆಧರಿಸಿ ಕೈಗೊಂಡಿರುವ ಕ್ರಮಗಳೇನು ಎಂಬುದರ ವಿವರಣೆ ನೀಡುವಂತೆ ಕೆಎಸ್​ಪಿಸಿಬಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.