ETV Bharat / city

ವಕ್ಫ್ ಮಂಡಳಿ ಸದಸ್ಯನ ವಿರುದ್ಧ ಕ್ರಮ ಕುರಿತು ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

ಅಕ್ರಮವಾಗಿ ಹಣ ಮಂಜೂರು ಮಾಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಮಂಡಳಿ ಸದಸ್ಯ ಎನ್.ಕೆ ಮೊಹಮ್ಮದ್ ಶಫಿ ಸಾದಿ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು ನಿಲುವು ತಿಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿದೆ.

High court
ಹೈಕೋರ್ಟ್
author img

By

Published : Jul 2, 2021, 4:06 PM IST

ಬೆಂಗಳೂರು: ಅಧಿಕಾರ ದುರ್ಬಳಕೆ ಮಾಡಿಕೊಂಡು ವಕ್ಫ್ ಮಂಡಳಿಯಿಂದ ಹಣ ಮಂಜೂರು ಮಾಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಮಂಡಳಿ ಸದಸ್ಯ ಎನ್.ಕೆ ಮೊಹಮ್ಮದ್ ಶಫಿ ಸಾದಿ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು ನಿಲುವು ತಿಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಹಾಗೂ ಬೆಂಗಳೂರು ನಗರ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಾದ ಆಲಿಸಿದ ಪೀಠ, ಕರ್ನಾಟಕ ವಕ್ಫ್ ಕಾಯ್ದೆ-1995ರ ಸೆಕ್ಷನ್ 20 (1) (ಬಿ) ಪ್ರಕಾರ ವಕ್ಫ್ ಮಂಡಳಿ ಸದಸ್ಯರು ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾದರೆ, ನಿರ್ಲಕ್ಷ್ಯ ತೋರಿದರೆ ಮತ್ತು ವಕ್ಫ್ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡರೆ ಅಂತಹವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಸದಸ್ಯ ಸ್ಥಾನದಿಂದ ವಜಾಗೊಳಿಸುವ ಅವಕಾಶವಿದೆ. ಅದರಂತೆ ಕ್ರಮ ಕೈಗೊಳ್ಳುವ ಕುರಿತು ನಿಲುವು ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ಅರ್ಜಿದಾರರ ಆರೋಪ:

ರಾಜ್ಯ ವಕ್ಫ್ ಮಂಡಳಿಯ ಹಾಲಿ ಸದಸ್ಯರಾಗಿರುವ ಶಫಿ ಸಾದಿ ಅವರು ಸಾದಿಯಾ ಎಜುಕೇಷನಲ್ ಫೌಂಡೇಶನ್​ನ ಪ್ರಧಾನ ಕಾರ್ಯದರ್ಶಿ ಸಹ ಆಗಿದ್ದಾರೆ. ಈ ಫೌಂಡೇಶನ್​ಗೆ ಒಳಪಟ್ಟಿರುವ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾದಿಯಾ ಮಸೀದಿಯ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ವಕ್ಫ್ ಮಂಡಳಿಯಿಂದ 15 ಲಕ್ಷ ರೂಪಾಯಿ ಮಂಜೂರು ಮಾಡಿಸಿಕೊಂಡಿದ್ದಾರೆ. ಮಸೀದಿಗೆ ಈ ಮೊದಲೇ ಕಾಂಪೌಂಡ್ ಗೋಡೆ ಇದ್ದರೂ, ಸುಳ್ಳು ದಾಖಲೆಗಳನ್ನು ಸಲ್ಲಿಸಿ ಹಣ ಮಂಜೂರು ಮಾಡಿಸಿಕೊಳ್ಳುವ ಮೂಲಕ ಶಫಿ ಸಾದಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ವಕ್ಫ್ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಿರುವ ಶಫಿ ಸಾದಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.