ETV Bharat / city

ಎಸಿಪಿ ಪ್ರಭುಶಂಕರ್ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್ಐಆರ್​ಗೂ ಹೈಕೋರ್ಟ್ ತಡೆ

ಲಾಕ್​ಡೌನ್ ಅವಧಿಯಲ್ಲಿ ಸಿಗರೇಟ್ ವ್ಯಾಪಾರಕ್ಕೆ ಸಹಕಾರ ನೀಡುವುದಾಗಿ ತಿಳಿಸಿ, ವ್ಯಾಪಾರಿಗಳಿಂದ ಲಂಚ ಪಡೆದ ಆರೋಪದಡಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಎಸಿಪಿ ಪ್ರಭುಶಂಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ( ಎಸಿಬಿ) ದಾಖಲಿಸಿದ್ದ ಎಫ್ಐಆರ್​ಗಳಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

High Court blocking FIR filed by ACB against ACP Prabhushankar
ಎಸಿಪಿ ಪ್ರಭುಶಂಕರ್ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್ಐಆರ್​ಗೂ ಹೈಕೋರ್ಟ್ ತಡೆ
author img

By

Published : Jun 7, 2020, 1:02 AM IST

ಬೆಂಗಳೂರು: ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಎಸಿಪಿ ಪ್ರಭುಶಂಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ( ಎಸಿಬಿ) ದಾಖಲಿಸಿದ್ದ ಎಫ್ಐಆರ್​ಗಳಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಲಾಕ್​ಡೌನ್ ಅವಧಿಯಲ್ಲಿ ಸಿಗರೇಟ್ ವ್ಯಾಪಾರಕ್ಕೆ ಸಹಕಾರ ನೀಡುವುದಾಗಿ ತಿಳಿಸಿ, ವ್ಯಾಪಾರಿಗಳಿಂದ ಲಂಚ ಪಡೆದ ಆರೋಪದಡಿ ಕೇಂದ್ರ ಅಪರಾಧ ವಿಭಾಗದ ಎಸಿಪಿ ಪ್ರಭುಶಂಕರ್ ವಿರುದ್ಧ ಕಾಟನ್ ಪೇಟೆ ಠಾಣೆ ಪೊಲೀಸರು 2 ಎಫ್ಐಆರ್ ಹಾಗೂ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು 3 ಪ್ರತ್ಯೇಕ ಎಫ್ಐಆರ್ ಗಳನ್ನ ದಾಖಲಿಸಿದ್ದರು. ಈ ಎಫ್ಐಆರ್​ಗಳನ್ನ ರದ್ದುಪಡಿಸುವಂತೆ ಕೋರಿ ಎಸಿಪಿ ಪ್ರಭುಶಂಕರ್ ಹೈಕೋರ್ಟ್​ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್​.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಕಳೆದ ಬುಧವಾರ ಕಾಟನ್ ಪೇಟೆ ಠಾಣೆ ಪೊಲೀಸರ ಎಫ್ಐಆರ್​ಗಳಿಗೆ ತಡೆಯಾಜ್ಞೆ ನೀಡಿತ್ತು.

ಇದೀಗ ಎಸಿಬಿ ದಾಖಲಿಸಿದ್ದ ಮೂರು ಪ್ರತ್ಯೇಕ ಎಫ್ಐಆರ್​ಗಳಿಗೂ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್​.ಪೊನ್ನಣ್ಣ ವಾದ ಮಂಡಿಸಿ, ಎಫ್ಐಆರ್ ದಾಖಲಿಸಬೇಕಾದರೆ ದೂರು ಸ್ವೀಕರಿಸಬೇಕಾಗುತ್ತದೆ. ಆದರೆ, ಅರ್ಜಿದಾರರ ವಿರುದ್ಧ ದೂರು ನೀಡದಿದ್ದರೂ ಎಸಿಬಿ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಇದಕ್ಕೂ ಮುನ್ನ ಕಾಟನ್​ಪೇಟೆ ಠಾಣೆ ಪೊಲೀಸರು 2 ಎಫ್ಐಆರ್ ದಾಖಲಿಸಿದ್ದರು. ಒಂದೇ ಆರೋಪಕ್ಕೆ ಎರಡು ತನಿಖಾ ಸಂಸ್ಥೆಗಳು ಸೂಕ್ತ ಆಧಾರವೇ ಇಲ್ಲದೆ ಪ್ರತ್ಯೇಕವಾಗಿ ಎಫ್ಐಆರ್​ಗಳನ್ನು ದಾಖಲಿಸಿರುವುದು ಮೇಲ್ನೋಟಕ್ಕೆ ಸಂಶಯಾಸ್ಪದವಾಗಿದೆ. ಹೀಗಾಗಿ ಎಫ್ಐಆರ್​ಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.