ETV Bharat / city

ಮೈಸೂರು ಪಾಲಿಕೆ ಮೇಯರ್ ಚುನಾವಣೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

ಒಮ್ಮೆ ಚುನಾವಣಾ ಪ್ರಕ್ರಿಯೆಗಳು ಪ್ರಾರಂಭವಾದ ಮೇಲೆ ನ್ಯಾಯಾಲಯ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ಮೈಸೂರು ಪಾಲಿಕೆ ಮೇಯರ್ ಚುನಾವಣೆಗೆ ತಡೆ ನೀಡುವಂತೆ ಕೋರಿದ್ದ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

high court
ಹೈಕೋರ್ಟ್​
author img

By

Published : Feb 23, 2021, 6:31 PM IST

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಿರಿಸಿರುವ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಮೇಯರ್ ಚುನಾವಣೆಗೆ ಇದ್ದ ಅಡ್ಡಿ ನಿವಾರಣೆಯಾಗಿದೆ.

ಈ ಕುರಿತು ಪಾಲಿಕೆ ಸದಸ್ಯ ಸಮೀವುಲ್ಲಾ ಸಲ್ಲಿಸಿರುವ ರಿಟ್ ಅರ್ಜಿಯನ್ನು ಇಂದು ನ್ಯಾ. ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಪ್ರತಿವಾದ ಆಲಿಸಿದ ಪೀಠ, ಮೇಯರ್ ಆಯ್ಕೆಗೆ ಈಗಾಗಲೇ ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ. ಒಮ್ಮೆ ಚುನಾವಣಾ ಪ್ರಕ್ರಿಯೆಗಳು ಪ್ರಾರಂಭವಾದ ಮೇಲೆ ನ್ಯಾಯಾಲಯ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ಅಧಿಸೂಚನೆಗೆ ತಡೆ ನೀಡುವಂತೆ ಕೋರಿದ್ದ ಮಧ್ಯಂತರ ಮನವಿಯನ್ನು ತಿರಸ್ಕರಿಸಿ, ವಿಚಾರಣೆ ಮುಂದೂಡಿತು.

ಅರ್ಜಿದಾರರ ಕೋರಿಕೆ

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಪಡಿಸಿ 2021ರ ಫೆ. 11ರಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿರುವ ಅರ್ಜಿದಾರರು, 2018ರಿಂದ ಸತತವಾಗಿ ಮೇಯರ್ ಸ್ಥಾನವನ್ನು ಮಹಿಳೆಗೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಗಲಭೆ ಪ್ರಕರಣ: ಎನ್​ಐಎ ಸಲ್ಲಿಸಿದ 7 ಸಾವಿರ ಪುಟಗಳ ಚಾರ್ಜ್​ಶೀಟ್​ನಲ್ಲಿ ಏನಿದೆ?

2018ರ ಜ. 24ರಿಂದ ನ. 17ರವರೆಗೆ ಎಸ್​ಸಿ ಮಹಿಳೆ, ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. 2020ರಲ್ಲಿ ಬಿಸಿಎ ಮಹಿಳೆ ಇತ್ತು. ಈಗ ಸಾಮಾನ್ಯ ಮಹಿಳೆ ನಿಗದಿಪಡಿಸಲಾಗಿದೆ. ಇದು ಕಾನೂನು ಬಾಹಿರವಾಗಿದ್ದು, ಸರ್ಕಾರದ ಅಧಿಸೂಚನೆ ರದ್ದುಪಡಿಸಿ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.