ETV Bharat / city

ಹೊರರಾಜ್ಯದ ಎಸ್​ಸಿ, ಎಸ್ಟಿ, ಒಬಿಸಿ ಮೀಸಲಿಗೆ ನಿಯಮ: ಸೂಕ್ತ ನಿರ್ಧಾರಕ್ಕೆ ಹೈಕೋರ್ಟ್​ ಸೂಚನೆ

ಹೊರರಾಜ್ಯದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲು ಕಲ್ಪಿಸುವುದಕ್ಕೆ ನಿರ್ಬಂಧ ಹೇರುವ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ.

high-court-direction
ಹೈಕೋರ್ಟ್​ ಸೂಚನೆ
author img

By

Published : Mar 31, 2022, 10:30 PM IST

ಬೆಂಗಳೂರು: ಕರ್ನಾಟಕಕ್ಕೆ ವಲಸೆ ಬಂದು ನೆಲೆಸಿರುವ ಹೊರ ರಾಜ್ಯದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಜನರಿಗೆ ರಾಜ್ಯ ಸರ್ಕಾರಿ ಉದ್ಯೋಗಳಲ್ಲಿ ಮೀಸಲು ಕಲ್ಪಿಸುವುದಕ್ಕೆ ನಿರ್ಬಂಧ ಹೇರಲು ಅಗತ್ಯ ತಿದ್ದುಪಡಿ ನಿಯಮ ರೂಪಿಸುವ ವಿಚಾರವನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ಕರ್ನಾಟಕಕ್ಕೆ ವಲಸೆ ಬಂದಿರುವ ಹೊರ ರಾಜ್ಯದ ಎಸ್ಸಿ-ಎಸ್ಟಿ ಮತ್ತು ಒಬಿಸಿ ಜನರಿಗೆ ರಾಜ್ಯ ಸರ್ಕಾರಿ ಉದ್ಯೋಗಳಲ್ಲಿ ಮೀಸಲು ಕಲ್ಪಿಸುವುದನ್ನು ನಿರ್ಬಂಧಿಸಲು ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಯಲ್ಲಿ ಮೀಸಲು) ಕಾಯ್ದೆ-1990 ಮತ್ತು ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಯಲ್ಲಿ ಮೀಸಲು) ಅಧಿನಿಯಮಗಳು-1992ಕ್ಕೆ ಅಗತ್ಯ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಡಾ. ಎಚ್. ಕೃಷ್ಣರಾಮ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಕುರಿತಂತೆ ಕೆಲ ಕಾಲ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರು ಈ ಕುರಿತು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಬೇಕು. ಅರ್ಜಿದಾರರ ಮನವಿ ಕುರಿತಂತೆ ಪರಿಶೀಲನೆ ನಡೆಸಿದ ನಂತರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ರಾಜ್ಯದ ಜನರಿಗೆ ಅನ್ಯಾಯ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್.ವಿ. ಗಿರಿಕುಮಾರ್ ವಾದ ಮಂಡಿಸಿ, ಹೊರ ರಾಜ್ಯದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅನೇಕ ಜನ ಕರ್ನಾಟಕಕ್ಕೆ ವಲಸೆ ಬಂದು ಇಲ್ಲಿಯೇ ನೆಲೆಯೂರಿದ್ದಾರೆ. ಅವರು ರಾಜ್ಯದಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲು ಕೋಟಾದಡಿ ರಾಜ್ಯ ಸರ್ಕಾರಿ ಉದ್ಯೋಗ ಗಿಟ್ಟಿಸುತ್ತಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಹುಟ್ಟಿ ಬೆಳೆದಿರುವ ಎಸ್ಸಿ-ಎಸ್ಟಿ ಹಾಗೂ ಒಬಿಸಿಯವರು ಸರ್ಕಾರದ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೇ, ರಾಷ್ಟ್ರಪತಿಗಳು 1950ರಲ್ಲಿ ಒಂದು ರಾಜ್ಯದ ಎಸ್ಸಿ-ಎಸ್ಟಿ ಮತ್ತು ಒಬಿಸಿಗೆ ಸೇರಿದ ಜನ ಮತ್ತೊಂದು ರಾಜ್ಯದಲ್ಲಿ ಮೀಸಲು ಸೌಲಭ್ಯ ಪಡೆಯುವಂತಿಲ್ಲ ಎಂದು ಆದೇಶಿಸಿದ್ದಾರೆ. ಕೇಂದ್ರ ಸರ್ಕಾರವು 1977ರಲ್ಲಿ ಎಲ್ಲಾ ರಾಜ್ಯಗಳಿಗೆ ಸ್ಪಷ್ಟ ಆದೇಶ ಮಾಡಿದೆ. ಅದರ ಅನುಸಾರ ಗೋವಾ, ಮಹಾರಾಷ್ಟ್ರ ಮತ್ತು ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳು ನಿಯಮ ರೂಪಿಸಿ ಜಾರಿಗೆ ತಂದಿವೆ.

ಕರ್ನಾಟಕದಲ್ಲಿ ಜನಿಸಿರುವ ಎಸ್ಸಿ-ಎಸ್ಟಿ ಮತ್ತು ಒಬಿಸಿಯವರಿಗೆ ಮಾತ್ರ ಸರ್ಕಾರಿ ಉದ್ಯೋಗದಲ್ಲಿ ಆಯಾ ಜಾತಿಯಲ್ಲಿ ಮೀಸಲು ಕಲ್ಪಿಸುವ ಸಂಬಂಧ ಯಾವುದೇ ನಿಮಮ ರಾಜ್ಯದಲ್ಲಿ ಇಲ್ಲ. ಆದ್ದರಿಂದ ಈ ಕುರಿತು ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಯಲ್ಲಿ ಮೀಸಲು) ಕಾಯ್ದೆ-1990 ಮತ್ತು ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಯಲ್ಲಿ ಮೀಸಲು) ಅಧಿನಿಯಮಗಳು-1992ಕ್ಕೆ ಅಗತ್ಯ ತಿದ್ದುಪಡಿ ನಿಯಮ ರೂಪಿಸಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಓದಿ: ಅಕ್ರಮ ಡಿನೋಟಿಫಿಕೇಶನ್​ ಆರೋಪ ಪ್ರಕರಣ.. ಬಿಎಸ್​ವೈ ವಿರುದ್ಧ ಕ್ರಿಮಿನಲ್‌ ಕೇಸ್​ ದಾಖಲಿಸುವಂತೆ ಕೋರ್ಟ್​ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.