ETV Bharat / city

ಬಿಟಿಸಿಯಲ್ಲಿ ಕುದುರೆಗಳ ಯೋಗಕ್ಷೇಮ: ಸತ್ಯಾಸತ್ಯತೆ ಅರಿಯಲು ಅಧಿಕಾರಿ ನೇಮಕಕ್ಕೆ ಹೈಕೋರ್ಟ್ ನಿರ್ದೇಶನ - horses Torture in Bangalore Turf Club

ಬಿಟಿಸಿಯಲ್ಲಿ ಕೈಗೊಳ್ಳಲಾಗಿರುವ ಸುಧಾರಣಾ ಕ್ರಮಗಳ ಪರಿಶೀಲನೆ ನಡೆಸಲು ಅಧಿಕಾರಿಯೊಬ್ಬರನ್ನು ನೇಮಿಸಿ 3 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಭಾರತೀಯ ಪ್ರಾಣಿ ಮಂಡಳಿಗೆ ಸೂಚಿಸಿರುವ ಪೀಠ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.

high court
ಹೈಕೋರ್ಟ್
author img

By

Published : Jan 4, 2022, 5:57 PM IST

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ಬಿಟಿಸಿ) ಕುದುರೆ ಲಾಯ ನವೀಕರಣ ಮತ್ತು ಕುದುರೆಗಳ ಯೋಗ ಕ್ಷೇಮ ಸುಧಾರಣೆಗೆ ಸಂಬಂಧಿಸಿದಂತೆ ಕಲ್ಪಿಸಿರುವ ಸೌಲಭ್ಯಗಳನ್ನು ಪರಿಶೀಲಿಸಿ, ವರದಿ ಸಲ್ಲಿಸಲು ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಬಿಟಿಸಿಯಲ್ಲಿ ರೇಸ್​ಗೆ ಬಳಸುವ ಕುದುರೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿ ಕ್ಯೂಪಾ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಬಿಟಿಸಿಯಲ್ಲಿ ಕುದುರೆ ಲಾಯಗಳ ನವೀಕರಣ ಸೇರಿ ಕುದುರೆಗಳ ಯೋಗಕ್ಷೇಮ ಸುಧಾರಣೆಗೆ ಮೂಲಸೌಕರ್ಯ ಕಲ್ಪಿಸಲಾಗಿದೆ. ಈ ವಿಚಾರದಲ್ಲಿ ಕೋರ್ಟ್ ನೀಡಿರುವ ಬಹುತೇಕ ನಿರ್ದೇಶನ ಪಾಲಿಸಲಾಗಿದೆ ಎಂದು ತಿಳಿಸಿ ಬಿಟಿಸಿ ಪ್ರಮಾಣಪತ್ರ ಸಲ್ಲಿಸಿದೆ.

ಹಾಗಾಗಿ, ಬಿಟಿಸಿಯಲ್ಲಿ ಕೈಗೊಳ್ಳಲಾಗಿರುವ ಸುಧಾರಣಾ ಕ್ರಮಗಳ ಪರಿಶೀಲನೆ ನಡೆಸಲು ಅಧಿಕಾರಿಯೊಬ್ಬರನ್ನು ನೇಮಿಸಿ 3 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಮಂಡಳಿಗೆ ಸೂಚಿಸಿರುವ ಪೀಠ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿದೆ.

ಇದನ್ನು ಓದಿ: ಅಮೆರಿಕ​​ದಲ್ಲಿ ಒಂದೇ ದಿನ 10 ಲಕ್ಷ ಕೋವಿಡ್‌ ಕೇಸ್, 1,600ಕ್ಕೂ ಹೆಚ್ಚು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.