ETV Bharat / city

ರೈತರ ಸಮಸ್ಯೆ ಬಗೆಹರಿಸಲು ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ - ಕುಂದುಕೊರತೆಗಳನ್ನು ನಿವಾರಿಸಲು ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ

ಲಾಕ್‌ಡೌನ್‌ ಅವಧಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

High Court directs government to meeting former problem
ರೈತರ ಸಮಸ್ಯೆ ಬಗೆಹರಿಸಲು ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
author img

By

Published : May 6, 2020, 9:03 PM IST

ಬೆಂಗಳೂರು: ಲಾಕ್‍ಡೌನ್ ಜಾರಿ ಮಾಡಿದ ಬಳಿಕ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಹಾಗೂ ಕುಂದು ಕೊರತೆಗಳನ್ನು ನಿವಾರಿಸಲು ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳು ಜಿಲ್ಲೆ ಹಾಗೂ ತಾಲೂಕುಮಟ್ಟದ ಸಭೆಗಳನ್ನು ನಡೆಸಬೇಕು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರು, ಮೈಸೂರಿನ ಈರುಳ್ಳಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರೈತರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆ ಮಾಡಲು ಜಿಲ್ಲಾಧಿಕಾರಿಗಳು ಕೂಡಲೇ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಹಭಾಗಿತ್ವದಲ್ಲಿ ಜಿಲ್ಲೆ ಮತ್ತು ತಾಲೂಕುಮಟ್ಟದಲ್ಲಿ ಸಭೆಗಳನ್ನು ನಡೆಸಬೇಕು. ಈ ಸಭೆಗಳಿಗೆ ರೈತರು ಹಾಗೂ ರೈತ ಮುಖಂಡರನ್ನು ಆಹ್ವಾನಿಸಿ, ಅವರು ಎದುರಿಸುತ್ತಿರುವ ಸಮಸ್ಯೆಗಳೇನು ಎಂದು ಆಲಿಸಿ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ನೀಡಬೇಕು ಎಂದು ನಿರ್ದೇಶಿಸಿತು.

ಇದಕ್ಕೂ ಮೊದಲು ಲಿಖಿತ ವಾದ ಮಂಡಿಸಿದ ಸರ್ಕಾರಿ ವಕೀಲ ವಿಕ್ರಂ ಹುಯಿಲ್ಗೋಳ, ಲಾಕ್‍ಡೌನ್ ಅವಧಿಯಲ್ಲಿ ಕೃಷಿ ಕ್ಷೇತ್ರಕ್ಕೆ ಮತ್ತು ರೈತರಿಗೆ ಅಗತ್ಯ ನೆರವು ನೀಡಲು ರಾಜ್ಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. "ಅಗ್ರಿ ವಾರ್ ರೂಂ' ತೆರೆಯಲಾಗಿದ್ದು, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹಾಯವಾಣಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಲೂಕುಮಟ್ಟದ ಕಚೇರಿಗಳಲ್ಲಿ 132 ಕಾಲ್ ಸೆಂಟರ್​ಗಳನ್ನು ತೆರೆಯಲಾಗಿದೆ. 742 ಹೋಬಳಿಗಳಲ್ಲಿ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಕೊಯ್ಲು ಮತ್ತು ಬಿತ್ತನೆಗೆ ಸಂಬಂಧಿಸಿದಂತೆ 542 ಗ್ರಾಹಕ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪೀಠಕ್ಕೆ ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.