ETV Bharat / city

ಸರ್ಕಾರಿ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಮೀಸಲು: ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

author img

By

Published : Dec 20, 2021, 10:18 PM IST

ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಮೀಸಲು ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತೃತೀಯ ಲಿಂಗಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲು

ಬೆಂಗಳೂರು: ಸರ್ಕಾರಿ ಪ್ರಾಧಿಕಾರಗಳು ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ (ಹಾರಿಜಾಂಟಲ್ ರಿಸರ್ವೇಷನ್) ಮೀಸಲು ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 2 ವಾರ ಕಾಲಾವಕಾಶ ನೀಡಿದೆ.

ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು ವಾದಿಸಿ, ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರಿಸಲಾಗಿದೆ. ಈ ಸಂಬಂಧ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಪ್ರಕಟಿಸಿದೆ.

ಸರ್ಕಾರದ ಈ ತಿದ್ದುಪಡಿ ನಿಯಮ ಸರ್ಕಾರಿ ಹುದ್ದೆಗಳಿಗಷ್ಟೇ ಅನ್ವಯಿಸುತ್ತದೆ. ಸರ್ಕಾರದ ಇತರ ಪ್ರಾಧಿಕಾರ ಹಾಗೂ ನಿಗಮ - ಮಂಡಳಿಗಳ ನೇಮಕಾತಿಯಲ್ಲಿ ಈ ತಿದ್ದುಪಡಿ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದೇವೆ.

ಈ ನಿಟ್ಟಿನಲ್ಲಿ ಪ್ರಾಧಿಕಾರ, ನಿಗಮ - ಮಂಡಳಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೆ.22ರಂದು ಸೂಚಿಸಿತ್ತು. ಕ್ರಮ ಕೈಗೊಳ್ಳಲು ನಾಲ್ಕು ವಾರ ಕಾಲಾವಶ ನೀಡಿತ್ತು. ಸರ್ಕಾರ ಈ ಸಂಬಂಧ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದರು.

ಇದೇ ವೇಳೆ, ಸರ್ಕಾರದ ಪರ ವಕೀಲರು, ನ್ಯಾಯಾಲಯದ ಆದೇಶ ಪಾಲಿಸಲು ಎರಡು ವಾರ ಕಾಲಾವಕಾಶ ನೀಡುವಂತೆ ಕೋರಿದರು. ಮನವಿ ಪುರಸ್ಕರಿಸಿದ ಪೀಠ, 2021ರ ಸೆ.22ರಂದು ನ್ಯಾಯಾಲಯ ನೀಡಿದ ನಿರ್ದೇಶನ ಪಾಲಿಸಲು ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

(ಇದನ್ನೂ ಓದಿ: ಹಾಸನದಲ್ಲಿ ಭೀಕರ ಅಪಘಾತ: ಅವಳಿ ಕಂದಮ್ಮಗಳ ದೇಹ ಛಿದ್ರ ಛಿದ್ರ.. ತಾಯಿಯೂ ಸಾವು, ತಂದೆ ಸ್ಥಿತಿ ಗಂಭೀರ)

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.